ಆರೋಗ್ಯ

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು ಗುಟ್ಕಾ ಉಗುಳಿದರೆ 1 ಸಾವಿರ ರೂ. ದಂಡ: ರಾಜ್ಯ ಸರ್ಕಾರದಿಂದ ಗೆಜೆಟ್ ಆದೇಶ

Pinterest LinkedIn Tumblr

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ, ತಂಬಾಕು ಸೇರಿದಂತೆ ಇನ್ನಿತರ ಪದಾರ್ಥಗಳನ್ನು ತಿಂದು ಉಗುಳುವುದನ್ನು ನಿಷೇಧಿಸಿ ರಾಜ್ಯ ಸರಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಒಂದು ವೇಳೆ ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು ಗುಟ್ಕಾ ಉಗುಳಿದರೆ 1 ಸಾವಿರ ರೂ. ದಂಡ ವಿಧಿಸಲು ಅವಕಾಶ ಕಲ್ಪಿಸುವ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ.

ಈ ಸಂಬಂಧ ರಾಜ್ಯ ಸರಕಾರವು ರೂಪಿಸಿದ್ದ ‘ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ವಿತರಣೆಯ ವಿನಿಮಯ) (ಕರ್ನಾಟಕ ತಿದ್ದುಪಡಿ) ಮಸೂದೆ-2024’ಕ್ಕೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ.

ಇಪ್ಪತ್ತೊಂದು ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಬೀಡಿ-ಸಿಗರೇಟು ಮತ್ತು ತಂಬಾಕಿನ ಉತ್ಪನ್ನಗಳ ಮಾರಾಟವನ್ನು ಈ ಕಾಯ್ದೆ ನಿಷೇಧಿಸುತ್ತದೆ. ಉಲ್ಲಂಘಿಸಿದವರಿಗೆ 1 ಸಾವಿರ ರೂ. ದಂಡ ವಿಧಿಸಬಹುದಾಗಿದೆ. ಉಪಹಾರ ಗೃಹ, ಪಬ್, ಬಾರ್ ಅಥವಾ ರೆಸ್ಟೋರೆಂಟ್‌ಗಳಲ್ಲಿ ಹುಕ್ಕಾ ಸೇವೆನೆಗೆ ಅವಕಾಶ ನೀಡುವುದನ್ನೂ ಈ ಕಾಯ್ದೆ ನಿಷೇಧಿಸುತ್ತದೆ. ಈ ನಿಷೇಧವನ್ನು ಉಲ್ಲಂಘಿಸಿದವರಿಗೆ 50 ಸಾವಿರ ರೂ.ನಿಂದ 1 ಲಕ್ಷ ರೂ.ಗಳವರೆಗೆ ದಂಡ ಮತ್ತು 1 ವರ್ಷದಿಂದ ಮೂರು ವರ್ಷಗಳವರೆಗೆ ಕಾರಾಗೃಹ ಶಿಕ್ಷೆ ವಿಧಿಸಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

Comments are closed.