India

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ ಎನ್ಕೌಂಟರ್ ಗೆ ಇಬ್ಬರು ಲಷ್ಕರ್ ಉಗ್ರರ ಸಾವು

Pinterest LinkedIn Tumblr

ಶ್ರೀನಗರ: ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಯ ಎನ್ ಕೌಂಟರ್ ಗೆ ಪಾಕಿಸ್ತಾನ ಬೆಂಬಲಿತ ಲಷ್ಕರ್ ಎ ತಯ್ಬಾ ಸಂಘಟನೆಯ ಇಬ್ಬರು ಉಗ್ರರು ಹತ್ಯೆಗೀಡಾಗಿರುವ ಘಟನೆ ಮಂಗಳವಾರ ನಡೆದಿದೆ.

ಇಬ್ಬರು ಸ್ಥಳೀಯರಾಗಿದ್ದು, ಲಷ್ಕರ್ ಉಗ್ರಗಾಮಿ ಸಂಘಟನೆಗೆ ಸೇರ್ಪಡೆಗೊಂಡಿದ್ದರು ಎಂದು ಕಾಶ್ಮೀರದ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ವಿಜಯ್ ಕುಮಾರ್ ತಿಳಿಸಿದ್ದಾರೆ. ಇಬ್ಬರು ಉಗ್ರರು ಹಲವಾರು ದಾಳಿಯಲ್ಲಿ ಶಾಮೀಲಾಗಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಕೂಂಬಿಂಗ್ ಕಾರ್ಯಾಚರಣೆ ಸಂದರ್ಭದಲ್ಲಿ ಉಗ್ರರ ಬಳಿ ಶರಣಾಗಲು ಸೂಚಿಸಲಾಗಿತ್ತು. ಆದರೆ ಅವರು ಭದ್ರತಾ ಪಡೆಯತ್ತ ಗುಂಡಿನ ದಾಳಿ ನಡೆಸಿದ್ದು, ಪ್ರತಿದಾಳಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.

ಪುಲ್ವಾಮಾದಲ್ಲಿ ಜೈಶ್ ಉಗ್ರಗಾಮಿ ಸಂಘಟನೆಯ ಇಬ್ಬರು ಸಹಚರರ ಬಂಧನ, ಶಸ್ತ್ರಾಸ್ತ್ರ ವಶಕ್ಕೆ
ಖಚಿತ ಮಾಹಿತಿ ಮೇರೆಗೆ ಕುಲ್ಗಾಮ್ ಜಿಲ್ಲೆಯ ಒಕಾಯ ಗ್ರಾಮದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ, ಅಡಗಿಕೊಂಡಿದ್ದ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಈ ಸಂದರ್ಭದಲ್ಲಿ ಶರಣಾಗಲು ಸೂಚಿಸಲಾಗಿತ್ತು. ಆದರೆ ಉಗ್ರರು ಗುಂಡಿನ ದಾಳಿ ಮುಂದುವರಿಸಿದ ಪರಿಣಾಮ ಭದ್ರತಾ ಪಡೆಯ ಪ್ರತಿದಾಳಿಯಲ್ಲಿ ಇಬ್ಬರು ಹತ್ಯೆಗೀಡಾಗಿರುವುದಾಗಿ ವರದಿ ತಿಳಿಸಿದೆ.

Comments are closed.