International

ಜನವರಿ 3 ರಿಂದ ದೇಶದಲ್ಲಿ 15-18 ವರ್ಷದೊಳಗಿನ ಮಕ್ಕಳಿಗೆ ಕೊರೋನಾ‌ ಲಸಿಕೆ: ಪ್ರಧಾನಿ ಮೋದಿ ಘೋಷಣೆ

Pinterest LinkedIn Tumblr

ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶನಿವಾರ ರಾತ್ರಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ.

2022ರ ಜನವರಿ 3, ಸೋಮವಾರದಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ದೇಶದಲ್ಲಿ ಲಸಿಕೆ ಆರಂಭವಾಗಲಿದೆ. ಈ ನಿರ್ಧಾರ ಕೊರೋನಾ ವಿರುದ್ಧದ ಹೋರಾಟವನ್ನು ಮತ್ತಷ್ಟು ಬಲಶಾಲಿಯಾಗಿಸಲಿದೆ. ಮತ್ತು ಶಾಲಾ ಕಾಲೇಜಿಗೆ ಹೋಗುವ ಮಕ್ಕಳು ಹಾಗೂ ಹೆತ್ತವರ ಭಯ ಕಡಿಮೆ ಮಾಡಲಿದೆ. ದೇಶದಲ್ಲಿರುವ ಹೆಲ್ತ್‌ ಕೇರ್ ಹಾಗೂ ಫ್ರಂಟ್‌ಲೈನ್ ವರ್ಕರ್ಸ್‌ ಈ ಹೋರಾಟದಲ್ಲಿ ದೇಶವನ್ನು ಸುರಕ್ಷಿತವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಇಂದು ಕೂಡಾ ಅವರು ಕೊರೋನಾ ರೋಗಿಗಳ ಸೇವೆಯಲ್ಲಿ ಬಹಳಷ್ಟು ಸಮಯ ಕಳೆಯುತ್ತಿದ್ದಾರೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ 2022ರ ಜ.10, ಸೋಮವಾರದಿಂದ ವೈದ್ಯಕೀಯ ಸಿಬ್ಬಂದಿಗೆ ಬೂಸ್ಟರ್ ಡೋಸ್ ಪ್ರಾರಂಭಿಸಲಾಗುವುದು ಎಂದರು.

(ಸಾಂದರ್ಭಿಕ ಚಿತ್ರ)

ವೃದ್ಧರು ಹಾಗೂ ಮೊದಲೇ ಯಾವುದಾದರೂ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಆದ್ದರಿಂದ 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಅವರ ವೈದ್ಯರ ಸಲಹೆ ಮೇರೆಗೆ ಬೂಸ್ಟರ್ ಡೋಸ್ ನೀಡುವ ಕಾರ್ಯವೂ ಆರಂಭವಾಗಲಿದೆ. ಈ ಮುನ್ನೆಚ್ಚರಿಕಾ ಲಸಿಕಾ ಅಭಿಯಾನ 2022ರ ಜ.10, ಸೋಮವಾರದಿಂದ ಆರಂಭಗೊಳ್ಳಲಿದೆ ಎಂದರು.

ಪ್ರಧಾನಿ ಮೋದಿ ಭಾಷಣದ ಪ್ರಮುಖ‌ ಅಂಶಗಳು…
ಭಾರತದಲ್ಲಿ ಕೊರೋನಾ ಹಾಗೂ ಓಮಿಕ್ರಾನ್ ಕಾಡುತ್ತಿದ್ದು, ಈ ವಿಚಾರವಾಗಿ ಭಾರತ ಇನ್ನೂ ಎಚ್ಚರದಿಂದಿರಬೇಕು. ಅಲ್ಲದೆ ಇದರ ವಿರುದ್ಧ ಹೋರಾಡುವ ಶಕ್ತಿ ಹೆಚ್ಚಿಸಿ ಕೊಳ್ಳಬೇಕು. ಕೊರೋನಾ ವಿರುದ್ಧ ಹೋರಾಡಲು ನಾಲ್ಕು ಲಕ್ಷ ಆಕ್ಸಿಜನ್ ಸಿಲಿಂಡರ್ ದೇಶಾದ್ಯಂತ ಕೊಟ್ಟಿದ್ದೇವೆ. ಒಂದು ಲಕ್ಷ ಐಸಿಯು ಬೆಡ್ ವ್ಯವಸ್ಥೆ ಮಾಡಲಾಗಿದೆ. ಮಕ್ಕಳಿಗಾಗಿಯೇ ವಿಶೇಷ ವಾರ್ಡ್‌ಗಳನ್ನು ನಿರ್ಮಿಸಿದ್ದೇವೆ. ಮೂರು ಸಾವಿರಕ್ಕೂ ಹೆಚ್ಚು ಆಕ್ಸಿಜನ್ ಪ್ಲಾಂಟ್‌ಗಳನ್ನು ನಿರ್ಮಿಸಿದ್ದೇವೆ. ಕೊರೋನಾ ಲಸಿಕೆಯನ್ನೂ ಎಲ್ಲರೂ ಪಡೆಯಬೇಕು. ಈಗಾಗಲೇ ಜನಸಂಖ್ಯೆಯ ಮುಕ್ಕಾಲು ಭಾಗ ಲಸಿಕೆ ನೀಡಿದ್ದೇವೆ. ವಿಶ್ವದಲ್ಲೇ ಅತ್ಯಂತ ವೇಗವಾಗಿ ಹಾಗೂ ಹೆಚ್ಚು ಮಂದಿಗೆ ವ್ಯಾಕ್ಸಿನೇಷನ್ ಆಗಿದೆ.ಹನ್ನೊಂದು ತಿಂಗಳಿನಿಂದ ನಡೆಯುತ್ತಿರುವ ಲಸಿಕಾ ಅಭಿಯಾನದಡಿ ದೆಶದ ಶೇ. 90ರಷ್ಟು ಜನರಿಗೆ ಲಸಿಕೆ ನಿಡಲಾಗಿದೆ ಎಂದರು.

Comments are closed.