International

ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ನಿಧನ

Pinterest LinkedIn Tumblr

ರಿಯಾದ್: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್(73) ಅವರು ಶುಕ್ರವಾರ ನಿಧನರಾದರು ಎಂದು ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯವು ಶುಕ್ರವಾರದಿಂದ 40 ದಿನಗಳ ಕಾಲ ಅಧ್ಯಕ್ಷರ ನಿಧನಕ್ಕೆ ಅಧಿಕೃತ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ.

ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು 2004ರ ನವೆಂಬರ್ 3ರಿಂದ ಯುಎಇ ನ ಅಧ್ಯಕ್ಷರಾಗಿ ಮತ್ತು ಅಬುಧಾಬಿಯ ಆಡಳಿತಗಾರನಾಗಿದ್ದರು.

ಅವರು ತಮ್ಮ ತಂದೆ ದಿವಂಗತ ಶೇಖ್ ಜಾಯೆದ್ ಬಿನ್ ಸುಲ್ತಾನ್ ಅಲ್ ನಹ್ಯಾನ್ ಅವರ ಉತ್ತರಾಧಿಕಾರಿಯಾಗಿ ಆಡಳಿತ ನಡೆಸಿದ್ದರು. 1971 ರಲ್ಲಿ ಯುಎಇಯ ಮೊದಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಶೇಖ್ ಜಾಯೆದ್ ಬಿನ್ ಸುಲ್ತಾನ್ ಅಲ್ ನಹ್ಯಾನ್ ಅವರು ನವೆಂಬರ್ 2, 2004 ರಂದು ನಿಧನರಾದರು.

1948 ರಲ್ಲಿ ಜನಿಸಿದ ಶೇಖ್ ಖಲೀಫಾ ಯುಎಇ ಎರಡನೇ ಅಧ್ಯಕ್ಷ ಮತ್ತು ಅಬುಧಾಬಿ ಎಮಿರೇಟ್‌ನ 16 ನೇ ಆಡಳಿತಗಾರರಾಗಿದ್ದರು.

 

Comments are closed.