International

ಜೂನ್ 26 ಶುಕ್ರವಾರ : ಎನ್‌ಆರ್‌ಐ ಸಚಿವಾಲಯ ಜಾರಿಗೆ ಆಗ್ರಹಿಸಿ ಜಾಗತಿಕ ಮಟ್ಟದಲ್ಲಿ ಟ್ವಿಟರ್ (X) ಅಭಿಯಾನ

Pinterest LinkedIn Tumblr

ಬೆಂಗಳೂರು: ಕರ್ನಾಟಕ ಅನಿವಾಸಿ ಒಕ್ಕೂಟದ ವತಿಯಿಂದ ಎನ್‌ಆರ್‌ಐ ಸಚಿವಾಲಯವನ್ನು ತಕ್ಷಣ ಜಾರಿಗೆ ತರಬೇಕು ಹಾಗೂ ಡಾ. ಆರತಿ ಕೃಷ್ಣ ಅವರನ್ನು ಎನ್‌ಆರ್‌ಐ ಸಚಿವರಾಗಿ ನೇಮಕ ಮಾಡಬೇಕೆಂದು ಆಗ್ರಹಿಸಿ ಜೂನ್ 26, ಶುಕ್ರವಾರ ಜಾಗತಿಕ ಮಟ್ಟದಲ್ಲಿ ಟ್ವಿಟ‌ರ್ ಎಕ್ಸ್ (X) ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ವಿಶ್ವದಾದ್ಯಂತ ನೆಲೆಸಿರುವ ಲಕ್ಷಾಂತರ ಅನಿವಾಸಿ ಕನ್ನಡಿಗರು ಈ ಅಭಿಯಾನದಲ್ಲಿ ಭಾಗವಹಿಸಿ ತಮ್ಮ ಧ್ವನಿಯನ್ನು ಸರ್ಕಾರದ ಗಮನಕ್ಕೆ ತಲುಪಿಸುವಂತೆ ಒಕ್ಕೂಟ ಮನವಿ ಮಾಡಿದೆ. ಹೊಸದಾಗಿ ರಚನೆಯಾಗಲಿರುವ ಅನಿವಾಸಿ ಕನ್ನಡಿಗರ ಸಚಿವಾಲಯದ ಸಚಿವ ಜವಾಬ್ದಾರಿಯನ್ನು ಡಾ. ಆರತಿ ಕೃಷ್ಣ ಅವರಿಗೆ ನೀಡಬೇಕು ಎಂದು ಕರ್ನಾಟಕ ಸಂಘ ದುಬೈ ಒತ್ತಾಯಿಸಿದೆ. ಅನಿವಾಸಿ ಕನ್ನಡಿಗರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಡಾ. ಆರತಿ ಕೃಷ್ಣ ಅವರು ನಿರ್ವಹಿಸುತ್ತಿರುವ ಪಾತ್ರವನ್ನು ಪರಿಗಣಿಸಿ, ಅವರಿಗೆ ಈ ಸಚಿವಾಲಯದ ಜವಾಬ್ದಾರಿ ನೀಡಬೇಕು ಎಂದು ಅದು ಕೋರಿದೆ.

ರಾಜ್ಯ ಸರ್ಕಾರದಲ್ಲಿ ಪ್ರತ್ಯೇಕ ಅನಿವಾಸಿ ಕನ್ನಡಿಗರ ಸಚಿವಾಲಯ ಸ್ಥಾಪನೆಗೆ ಆಗ್ರಹಿಸಿ ಆರಂಭಿಸಿರುವ ಟ್ವಿಟ್ಟರ್‌ ಅಭಿಯಾನಕ್ಕೆ ಜಗತ್ತಿನ ವಿವಿಧ ದೇಶಗಳಲ್ಲಿರುವ ಎಲ್ಲಾ ಪ್ರಮುಖ ಕನ್ನಡ ಸಂಘಟನೆಗಳು ಮತ್ತು ಪ್ರವಾಸಿ ಭಾರತೀಯ ಸಂಸ್ಥೆಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ. ವಿಶೇಷವಾಗಿ ಕರ್ನಾಟಕ ಸಂಘ ದುಬೈ ಈ ಬೇಡಿಕೆಗೆ ತನ್ನ ಧ್ವನಿಯೆತ್ತಿದೆ.

ನೆದರ್‌ಲ್ಯಾಂಡ್, ಯುರೋಪ್ ಸಹಿತ ವಿಶ್ವದ ನಾನಾ ದೇಶದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ ಎಂದು ಉದ್ಯಮಿ ಹಾಗೂ ಕನ್ನಡ ಬಳಗ ಹಾಲೆಂಡ್‌ನ ಅಶೋಕ್ ಹಟ್ಟಿ ಹೇಳಿದ್ದಾರೆ.

ಈ ಅಭಿಯಾನದ ಮೂಲಕ ರಾಜ್ಯ ಸರ್ಕಾರವು ಅನಿವಾಸಿ ಕನ್ನಡಿಗರ ಸಮಸ್ಯೆಗಳು, ಹಕ್ಕುಗಳು ಹಾಗೂ ಕಲ್ಯಾಣಕ್ಕೆ ವಿಶೇಷ ಆದ್ಯತೆ ನೀಡಿ ಪ್ರತ್ಯೇಕ ಎನ್‌ಆರ್‌ಐ ಸಚಿವಾಲಯವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಲಾಗಿದೆ. ಜೊತೆಗೆ, ಎನ್‌ಆರ್‌ಐ ಸಮುದಾಯದ ಪರವಾಗಿ ಕಾರ್ಯನಿರ್ವಹಿಸಿರುವ ಡಾ. ಆರತಿ ಕೃಷ್ಣ ಅವರಿಗೆ ಎನ್‌ಆರ್‌ಐ ಸಚಿವರ ಜವಾಬ್ದಾರಿಯನ್ನು ನೀಡಬೇಕೆಂದು ಆಗ್ರಹಿಸಲಾಗಿದೆ.

ಈ ಅಭಿಯಾನದ ಮೂಲಕ ರಾಜ್ಯ ಸರ್ಕಾರವು ಅನಿವಾಸಿ ಕನ್ನಡಿಗರ ಸಮಸ್ಯೆಗಳು, ಹಕ್ಕುಗಳು ಹಾಗೂ ಕಲ್ಯಾಣಕ್ಕೆ ವಿಶೇಷ ಆದ್ಯತೆ ನೀಡಿ ಪ್ರತ್ಯೇಕ ಎನ್‌ಆರ್‌ಐ ಸಚಿವಾಲಯವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಲಾಗಿದೆ. ಜೊತೆಗೆ, ಎನ್‌ಆರ್‌ಐ ಸಮುದಾಯದ ಪರವಾಗಿ ಕಾರ್ಯನಿರ್ವಹಿಸಿರುವ ಡಾ. ಆರತಿ ಕೃಷ್ಣ ಅವರಿಗೆ ಎನ್‌ಆರ್‌ಐ ಸಚಿವರ ಜವಾಬ್ದಾರಿಯನ್ನು ನೀಡಬೇಕೆಂದು ಆಗ್ರಹಿಸಲಾಗಿದೆ.

ಜೂನ್ 26ರಂದು ಸಂಜೆ 6 ಗಂಟೆಗೆ (ಭಾರತೀಯ ಕಾಲಮಾನ) ನಡೆಯಲಿರುವ ಈ ಅಭಿಯಾನದಲ್ಲಿ ವಿಶ್ವದಾದ್ಯಂತ ಇರುವ ಅನಿವಾಸಿ ಕನ್ನಡಿಗರು ಹಾಗೂ ಕನ್ನಡಾಭಿಮಾನಿಗಳು ಟ್ವಿಟರ್ (X) ಮೂಲಕ ತಮ್ಮ ಬೆಂಬಲವನ್ನು ವ್ಯಕ್ತಪಡಿಸುವಂತೆ ಕರ್ನಾಟಕ ಅನಿವಾಸಿ ಒಕ್ಕೂಟ ಕೋರಿದೆ.

Comments are closed.