Karnataka

‘ಈ ಸಲ ಕಪ್‌ ಆರ್‌ಸಿಬಿಯದ್ದು’: 18 ವರ್ಷಗಳ ಬಳಿಕ ಟ್ರೋಫಿ ಗೆದ್ದು ಬೀಗಿದ ಆರ್‌ಸಿಬಿ | ಅಭಿಮಾನಿಗಳ ಸಂಭ್ರಮ

Pinterest LinkedIn Tumblr

ಅಹ್ಮದಾಬಾದ್: ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿತ್ತು.

191 ರನ್‌ಗಳ ಬೃಹತ್ ಮೊತ್ತ ಬೆನ್ನತ್ತಿದ ಪಂಜಾಬ್ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 184 ರನ್ ಗಳಿಸಿತು.

ಆರ್.ಸಿ.ಬಿ. ಕಪ್ ಗೆಲ್ಲುತ್ತಲೆ ಅಭಿಮಾನಿಗಳ ಹರ್ಷ ಮುಗಿಲುಮುಟ್ಟಿದೆ.

Comments are closed.