Mumbai

‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿ ಸುದ್ದಿಯಾದ ವಿದ್ಯಾರ್ಥಿನಿ ಮುಸ್ಕಾನ್ ಮನೆಗೆ ಭೇಟಿ ನೀಡಿ ಭರ್ಜರಿ ಗಿಫ್ಟ್ ಕೊಟ್ಟ ಮುಂಬಯಿ ಶಾಸಕ..!

Pinterest LinkedIn Tumblr

ಮಂಡ್ಯ: ಇಲ್ಲಿನ ಪಿಇಎಸ್ ಕಾಲೇಜು ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ಗುಂಪು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದಾಗ ಅದಕ್ಕೆ ಪ್ರತಿಯಾಗಿ ಮುಸ್ಕಾನ್ ಎಂಬ ವಿದ್ಯಾರ್ಥಿನಿಯೋರ್ವಳು ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದು ಎಲ್ಲೆಡೆ ಸುದ್ದಿಯಾಗಿತ್ತು.

ಮಂಡ್ಯದ ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಮುಸ್ಕಾನ್ ​ಅಲ್ಲಾಹು ಅಕ್ಬರ್ ಎಂದು ಕೂಗಿದ್ದಕ್ಕೆ ಅನೇಕ ಮುಸ್ಲಿಂ ಮುಖಂಡರು, ಕಾಂಗ್ರೆಸ್ ನಾಯಕರು ಶ್ಲಾಘಿಸಿದ್ದರು. ಮುಸ್ಲಿಂ ಸಂಘಟನೆಯೊಂದು ಯುವತಿಗೆ 5 ಲಕ್ಷ ರೂಪಾಯಿ ನಗದು ಬಹುಮಾನ ಕೂಡ ಘೋಷಿಸಿತ್ತು.

ಇದೀಗ ಮುಂಬೈನ ಬಾಂದ್ರಾ ಪೂರ್ವ ಕ್ಷೇತ್ರದ ಶಾಸಕ ಜಿಶಾನ್ ಸಿದ್ದಿಕ್​ ಕೂಡ ಮುಸ್ಕಾನ್ ಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಇಂದು ಮಂಡ್ಯದ ಗುತ್ತಲು ಬಡಾವಣೆಯಲ್ಲಿರುವ ಮುಸ್ಕಾನ್ ಮನೆಗೆ ಭೇಟಿ ನೀಡಿದ ಮಹಾರಾಷ್ಟ್ರದ ಶಾಸಕ ಜಿಶಾನ್ ಸಿದ್ದಿಕ್​ ಆಕೆಗೆ ಐ ಫೋನ್ ಮತ್ತು ಸ್ಮಾರ್ಟ್​ವಾಚ್​ ಉಡುಗೊರೆ ನೀಡಿದ್ದಾರೆ.

ಮುಸ್ಕಾನ್​ ಘೋಷಣೆ ಕೂಗಿರುವುದು ನನಗೆ ಹೆಮ್ಮೆ ಅನಿಸಿದೆ. ಮಂಡ್ಯದಿಂದ ಇಂಡಿಯಾವರೆಗೂ ಆಕೆ ಬಗ್ಗೆ ಗರ್ವ ಪಡುತ್ತಿದೆ. ಹಿಜಾಬ್​ ಧರಿಸುವುದು ಮುಸ್ಲಿಂ ಹೆಣ್ಣುಮಕ್ಕಳ ಹಕ್ಕು. ಹೆಣ್ಣುಮಕ್ಕಳು ತಮ್ಮ ಹಕ್ಕಿನ ಬಗ್ಗೆ ಧೈರ್ಯದಿಂದ ಧ್ವನಿ ಎತ್ತಿದ್ದಾರೆ ಎಂದು ಶಾಸಕ ಜಿಶಾನ್ ಸಿದ್ದಿಕ್​ ಹೇಳಿದ್ದಾರೆ.

 

Comments are closed.