ಮುಂಬೈ: ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಶ್ವಾಸಮತ ಯಾಚನೆ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಶಾಸಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಅವರು ತಮ್ಮ ಸಿಎಂ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.
164–99 ಮತಗಳ ಅಂತರದಲ್ಲಿ ಶಿಂಧೆ ಸರ್ಕಾರ ವಿಶ್ವಾಸ ಗೆದ್ದಿದೆ. 3 ಸದಸ್ಯರು ವಿಧಾನಸಭೆ ಅಧಿವೇಶನಕ್ಕೆ ಗೈರಾಗಿದ್ದರು. ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಮಹಾವಿಕಾಸ ಆಘಾಡಿ ಸರ್ಕಾರದ ವಿರುದ್ಧ ಬಂಡೆದ್ದು, ಬಿಜೆಪಿಯೊಂದಿಗೆ ಸೇರಿ ಶಿಂಧೆ ಅವರು ಮುಖ್ಯಮಂತ್ರಿಯಾಗಿದ್ದರು. ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಉಪಮುಖ್ಯಮಂತ್ರಿಯಾಗಿದ್ದಾರೆ.
ಉದ್ಧವ್ ಠಾಕ್ರೆಯೊಂದಿಗೆ ಗುರುತಿಸಿಕೊಂಡಿದ್ದ ಮತ್ತೊಬ್ಬ ಶಾಸಕ, ಸಂತೋಶ್ ಬಂಗಾರ್ ಎಂಬುವವರೂ ಕೂಡ ಇಂದು ಶಿಂಧೆ ಬಣಕ್ಕೆ ಸೇರ್ಪಡೆಯಾಗಿದ್ದಾರೆ. ಇದರೊಂದಿಗೆ ಶಿಂಧೆ ಕಡೆಯ ಶಾಸಕರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಇದಕ್ಕೂ ಹಿಂದೆ ಶಿಂಧೆ – ಬಿಜೆಪಿ ದೋಸ್ತಿ ತಮ್ಮ ಕಡೆಯ ರಾಹುಲ್ ನರ್ವೇಕರ್ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಲಾಗಿತ್ತು.
Comments are closed.