ಮುಂಬಯಿ: ಪಾಣೆ ಮಂಗಳೂರು ಸುಮಂಗಲ ಸುಮಂಗಲ ಸಭಾಂಗಣದಲ್ಲಿ ವಿಶ್ವ ಗಾಣಿಗರ ಚಾವಡಿ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಮತ್ತು ಕಣ್ಣಿನ ತಪಾಸಣೆ ಶಿಬಿರ ಕಾರ್ಯಕ್ರಮ ಹಾಗೂ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮವು ಆ. 11ರಂದು ನಡೆಯಿತು.
ಈ ಸಂದರ್ಭದಲ್ಲಿ ’ಗೇನದ ತುಡರ್ ನಿಧಿ ಸಮರ್ಪಣೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮುಂಬಯಿಯ ಸಾಪಲ್ಯ ಸೇವಾ ಸಂಘದ ಅಧ್ಯಕ್ಷ ಶ್ರೀನಿವಾಸ ಪಿ. ಸಾಫಲ್ಯ ಮತ್ತು ರಿತಿಕಾ ಶ್ರೀನಿವಾಸ್ ದಂಪತಿಯನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಬಂಟ್ವಾಳ ಗಾಣಿಗರ ಸೇವಾ ಸಂಘದ ಅಧ್ಯಕ್ಷ ಬಿ ರಾಘು ಸಪಲ್ಯ, ಸುಮಂಗಳ ಕ್ರೆಡಿಟ್ ಸೊಸೈಟಿಯ ಅಧ್ಯಕ್ಷ ನಾಗೇಶ್ ಕಲ್ಲಡ್ಕ, ಗಾಣಿಗರ ಸಂಘದ ಅಧ್ಯಕ್ಷ ಭಾಸ್ಕರ್ ಎಡಪದವು, ಕರಾವಳಿ ಕ್ರೆಡಿಟ್ ಸೊಸೈಟಿಯ ನಿರ್ದೇಶಕಿ ಉಷಾ ಕೇಶವ ಮಳಲಿ, ರಾಮದಾಸ್ ಬಂಟ್ವಾಳ, ಕೇಶವ ದೈಪಲ, ಉಮೇಶ್ ಅರಳ, ಟ್ರಸ್ಟ್ ನ ಅಧ್ಯಕ್ಷ ಹರಿಪ್ರಸಾದ್ ಶಕ್ತಿನಗರ ಉಪಸ್ಥಿತರಿದ್ದರು.
ಟ್ರಸ್ಟ್ ನ ಕಾರ್ಯದರ್ಶಿ ದೇವಿ ಪ್ರಸಾದ್ ಎಂ ಸ್ವಾಗತಿಸಿದರು, ಉಪಾಧ್ಯಕ್ಷ ಗಣೇಶ್ ಡಿ ಶಂಭೂರು ವಂದಿಸಿದರು. ವಿಜಯಾ ಪೂಯ್ತಾಜೆ ಕಾರ್ಯಕ್ರಮ ನಿರೂಪಿಸಿದರು.
Comments are closed.