Mumbai

ಮನೆ ಕಳವು ಪ್ರಕರಣದಲ್ಲಿ ನಾಲ್ವರು ಅಂತರಾಜ್ಯ ಕಳ್ಳರನ್ನು ಬಂಧಿಸಿದ ಕುಂದಾಪುರ ಪೊಲೀಸರು

Pinterest LinkedIn Tumblr

ಕುಂದಾಪುರ: ಕುಂದಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಜುಲೈನಲ್ಲಿ ನಡೆದಿದ್ದ ಎರಡು ಮನೆಗಳಿಗೆ ನುಗ್ಗಿ ಕಳ್ಳತನ ಸಹಿತ ವಿವಿಧ ಜಿಲ್ಲೆಗಳಲ್ಲಿ ಮನೆಗಳ್ಳತನ ನಡೆಸಿದ್ದ ನಾಲ್ವರು ಅಂತರಾಜ್ಯ ಕಳ್ಳರನ್ನು ಉ.ಕ. ಜಿಲ್ಲೆಯ ಹಳಿಯಾಳ ಪೊಲೀಸರು ಬಂಧಿಸಿದ್ದು ಕುಂದಾಪುರದ ಕಳ್ಳತನ ಕೃತ್ಯಕ್ಕೆ ಸಂಬಂಧಿಸಿದಂತೆ ಬಾಡಿ ವಾರಂಟ್ ಮೂಲಕ ಕುಂದಾಪುರ ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ಮಹಾರಾಷ್ಟ್ರ ಮೂಲದ ಸೊಲ್ಲಾಪುರ ಭಾಗದ ನಿವಾಸಿಗಳಾದ ಲಖನ್ ಕುಲಕರ್ಣಿ (31), ಸಂದೀಪ್ ಲವಟೆ (25), ವಿವೇಕ್ ಕುಂಬಾರ (26), ಅಜೀಜ್ ಯಾನೆ ಚೋಟೆ (28), ಹಾಗೂ ಬಂಧಿತ ಆರೋಪಿಗಳು.

ಇವರು ಕಳೆದ ಜು.19 ರಂದು ಇಲ್ಲಿನ ಪುರಸಭೆ ವ್ಯಾಪ್ತಿಯ ಬಿಬಿ ರಸ್ತೆಯ ವೆಸ್ಟ್ ಬ್ಲಾಕ್‌ನಲ್ಲಿರುವ ರೋಹಿತ್ ಅವರ ಮನೆಗೆ ಯಾರೂ ಇಲ್ಲದ ವೇಳೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ಇನ್ನಿತರ ಸೊತ್ತುಗಳನ್ನು ಕಳವುಗೈದಿದ್ದರು. ಕುಂದಾಪುರದ ಪಿ. ರವೀಂದ್ರ ಅವರ ಮನೆಗೆ ನುಗ್ಗಿದ ಕಳ್ಳರು ಬೆಳ್ಳಿ, ಚಿನ್ನಾಭರಣ ಸೇರಿದಂತೆ ಒಟ್ಟಾರೆ 4.57 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಕಳವುಗೈದಿದ್ದರು. ಇದಲ್ಲದೆ ಇವರು ಹಳಿಯಾಳ ಠಾಣಾ ವ್ಯಾಪ್ತಿಯಲ್ಲೂ ನಡೆದ ಕಳ್ಳತನದಲ್ಲಿ ಭಾಗಿಯಾಗಿದ್ದು ಬಂಧನ ವೇಳೆ ಕುಂದಾಪುರದಲ್ಲಿ ನಡೆಸಿದ ಕಳವು ಕೃತ್ಯದ ಮಾಹಿತಿಯನ್ನು ಪೊಲೀಸರೆದುರು ಬಾಯ್ಬಿಟ್ಟಿದ್ದಾರೆ. ಕುಂದಾಪುರ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬಂಧಿತರ ಪೈಕಿ ಸಚಿನ್ ಯಾನೆ ಲಖನ್ ವಿರುದ್ಧ ಕರ್ನಾಟಕದ ವಿವಿಧೆಡೆ 28 ಪ್ರಕರಣ, ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳಲ್ಲೂ ಪ್ರಕರಣ ದಾಖಲಾಗಿದ್ದು 3 ಪ್ರಕರಣದಲ್ಲಿ ಶಿಕ್ಷೆಯಾಗಿದೆ. ಅಜೀಜ್ ವಿರುದ್ಧ ಕರ್ನಾಟಕದಲ್ಲಿ 2 ಪ್ರಕರಣ, ಮಹಾರಾಷ್ಟ್ರದಲ್ಲಿಯೂ ಕೇಸು ದಾಖಲಾಗಿದೆ. ಸಂದೀಪ್ ವಿರುದ್ಧ ಮಹಾರಾಷ್ಟ್ರದಲ್ಲಿ ಸುಲಿಗೆ, ಕಳ್ಳತನ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Comments are closed.