Mumbai

ಡಾ‌. ಪ್ರದೀಪ್‌ ನಿರ್ದೆಶನದ ಕನ್ನಡದ ಕಿರುಚಿತ್ರಕ್ಕೆ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

Pinterest LinkedIn Tumblr

ಉಡುಪಿ: ಮುಂಬೈನಲ್ಲಿ ನಡೆದ 19ನೇ ಮುಂಬೈ ಅಂತರ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡದ ಕಿರುಚಿತ್ರ ‘ದಿ ಹಗ್ ಆಫ್ ಎಂಪ್ಟಿನೆಸ್’ (ಖಾಲಿತನದ ಅಪ್ಪುಗೆ) ರಾಷ್ಟ್ರೀಯ ಸ್ಪರ್ಧಾ ವಿಭಾಗದಲ್ಲಿ ಪ್ರಶಸ್ತಿ ಗೆದ್ದಿದೆ.

ಚಿತ್ರದ ನಿರ್ದೇಶಕ ಡಾ.ಪ್ರದೀಪ್ ಕೆಂಚನೂರು ಅವರಿಗೆ ಪ್ರೀ ಪ್ರೆಸ್ತಿ ಅಂತರರಾಷ್ಟ್ರೀಯ ಕ್ರಿಟಿಕ್ ಅಸೋಸಿಯೇಷನ್ ನೀಡುವ ‘ಅತ್ಯುತ್ತಮ ನಿರ್ದೇಶಕ’ ಪ್ರಶಸ್ತಿಯನ್ನ ನೀಡಿ ಗೌರವಿಸಲಾಗಿದೆ. ಭಾರತೀಯ ಫಿಲ್ಮ ಸೊಸೈಟಿಗಳ ಒಕ್ಕೂಟದ ಉಪಾಧ್ಯಕ್ಷ ಪ್ರೇಮೇಂದ್ರ ಮಜುಂದಾ‌ರ್ ಅವರು ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.

ಸದ್ಯ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿರುವ ಡಾ. ಪ್ರದೀಪ್ ಕೆಂಚನೂರು ಅವರಿಗೆ ಇದು ಚೊಚ್ಚಲ ಚಿತ್ರವಾಗಿದ್ದು, ಮೊದಲ ಪ್ರಯತ್ನದಲ್ಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ರಾಷ್ಟ್ರೀಯ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಎನ್‌ಎಫ್‌ಡಿಸಿ ಸಂಯುಕ್ತವಾಗಿ ಆಯೋಜಿಸಿದ್ದ ಈ ಚಿತ್ರೋತ್ಸವದಲ್ಲಿ 48 ರಾಷ್ಟ್ರಗಳಿಂದ 903 ಚಿತ್ರಗಳು ಸ್ಪರ್ಧಿಸಿದ್ದವು.ಡಾ. ಪ್ರದೀಪ್ ಅವರು ಉಡುಪಿಯ ಕುಂದಾಪುರ ತಾಲೂಕಿನ ಕೆಂಚನೂರಿ‌ನ ಬಗ್ವಾಡಿಮನೆಯವರು.

Comments are closed.