ಉಡುಪಿ: ಬಹರೈನ್, ಕತಾರ್, ಕುವೈಟ್, ದುಬೈ ಮುಂತಾದ ಕೊಲ್ಲಿ ರಾಷ್ಟ್ರಗಳಲ್ಲಿರುವ ಕನ್ನಡಿಗರ ಮನವಿಯಂತೆ, ಯುದ್ಧಪೀಡಿತ ಪ್ರದೇಶಗಳ ಭಾರತೀಯರನ್ನು ರಕ್ಷಿಸುವ ಕುರಿತಂತೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರನ್ನು ಹೊಸದಿಲ್ಲಿಯ ಪಾರ್ಲಿಮೆಂಟ್ ಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಸಲ್ಲಿಸಿದರು.

ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಭಾರತೀಯರ ರಕ್ಷಣೆಯ ಬಗ್ಗೆ ವಿವರಿಸಿದ ಸಚಿವ ಜೈಶಂಕರ್, ಆ ಪ್ರದೇಶದ ವಿಮಾನ ನಿಲ್ದಾಣದ ಮೇಲೆ ದಾಳಿಯಾಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರಕಾರ ಪ್ರಯತ್ನ ಮಾಡುತ್ತಿದೆ.ಯಾವುದೇ ಆತಂಕ ಬೇಡ ಎಂದು ಭರವಸೆ ನೀಡಿದರು ಎಂದು ತಿಳಿದುಬಂದಿದೆ.
Comments are closed.