ಕರ್ನಾಟಕ

81ನೆ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಿದ್ದಲಿಂಗಯ್ಯ

Pinterest LinkedIn Tumblr

siddalingayya

ಬೆಂಗಳೂರು, ಡಿ.19: ಪ್ರಸ್ತುತ ಸಾಲಿನ 81ನೆ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಕವಿ ಡಾ.ಸಿದ್ದಲಿಂಗಯ್ಯ ಆಯ್ಕೆಯಾಗಿದ್ದು, ಸಾಹಿತಿಗಳಲ್ಲಿ ಹಾಗೂ ಅಭಿಮಾನಿಗಳಲ್ಲಿ ಹರ್ಷ ಉಂಟಾಗಿದೆ. ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ೆಬ್ರವರಿ 1ರಿಂದ 3ನೆ ತಾರೀಕಿನವರೆಗೆ ನಡೆಯುವ 81ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಹಿರಿಯ ಕವಿ ಡಾ.ಸಿದ್ದಲಿಂಗಯ್ಯನವರನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿಯವರ ಅಧ್ಯಕ್ಷತೆಯಲ್ಲಿ ಇಂದು ಸಾಹಿತ್ಯ ಪರಿಷತ್ತಿನಲ್ಲಿ ಗೌಪ್ಯ ಮತದಾನದ ಮೂಲಕ ಆಯ್ಕೆ ಮಾಡಲಾಯಿತು.

ಈ ಬಾರಿಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನವನ್ನು ದಲಿತ ಸಾಹಿತಿಗಳು ಅಲಂಕರಿಸಬೇಕೆಂಬ ಪರಿಷತ್ತಿನ ಒತ್ತಾಸೆಯ ಹಿನ್ನೆಲೆಯಲ್ಲಿ ಡಾ.ಸಿದ್ದಲಿಂಗಯ್ಯಅವರನ್ನು ಆಯ್ಕೆ ಮಾಡಲಾಗಿದೆ. ಸಮ್ಮೇಳನಾಧ್ಯಕ್ಷರಾಗಲು ಮತ್ತೊಬ್ಬ ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಸುತಾರಾಂ ಒಪ್ಪದ ಕಾರಣ, ಆ ಸ್ಥಾನಕ್ಕೆ ಸಿದ್ದಲಿಂಗಯ್ಯ ಅವರೇ ಸೂಕ್ತ ಎಂಬ ತೀರ್ಮಾನಕ್ಕೆ ಪರಿಷತ್ತು ಬಂದಿದೆ. ಸಮ್ಮೇಳನಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಪಟ್ಟಿಯಲ್ಲಿ ಹಿರಿಯ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ಟಿ.ವಿ.ವೆಂಕಟಾಚಲಶಾಸಿ, ಹಂಪ ನಾಗರಾಜಯ್ಯ, ಸಿದ್ದಲಿಂಗಯ್ಯ ಅವರ ಹೆಸರುಗಳು ಇದ್ದವು. ದಲಿತ ಸಾಹಿತಿಯೊಬ್ಬರನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಮಾಡಬೇಕೆಂಬ ಕಾರಣಕ್ಕಾಗಿ ಸಿದ್ದಲಿಂಗಯ್ಯ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.

ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲೀಕ ಹಾಲಂಬಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪರಿಷತ್ತಿನ ಮಾಜಿ ಅಧ್ಯಕ್ಷ ನಲ್ಲೂರು ಪ್ರಸಾದ್ ಸೇರಿದಂತೆ ಹಲವು ಹಿರಿಯ ಸಾಹಿತಿಗಳೂ ಭಾಗವಹಿಸಿದರು.

ಶ್ರವಣಬೆಳಗೊಳದ ಚಂದ್ರಗಿರಿ ಬೆಟ್ಟದ ಹಿಂಭಾಗದಲ್ಲಿನ 24 ಎಕರೆ ವಿಶಾಲ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮಗಳು ೆ.1,2,3ರಂದು ನಡೆಯಲಿವೆ.ಜೈನ ಗುರು ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳು ಜಿಲ್ಲಾಕಾರಿ ವಿ. ಅನ್ಬುಕುಮಾರ್ ಸೇರಿದಂತೆ ಪ್ರಮುಖರು ಸಮ್ಮೇಳನದ ಸಿದ್ಧತೆಯ ಪರಿಶೀಲನೆ ನಡೆಸಿದ್ದಾರೆ.

ಮೈಸೂರು, ಕಲಬುರಗಿ, ಬೀದರ್, ಶಿವಮೊಗ್ಗ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯವರು ತಮ್ಮ ಜಿಲ್ಲೆಯಲ್ಲಿ ಸಮ್ಮೇಳನ ಆಯೋಜಿಸುವಂತೆ ಸಭೆಯಲ್ಲಿ ಮನವಿ ಮಾಡಿದರು. ಈ ಕುರಿತು ಹಲವು ಸುತ್ತಿನ ಚರ್ಚೆ ನಡೆದ ಬಳಿಕ ಶ್ರವಣಬೆಳಗೊಳದಲ್ಲಿ ಸಮ್ಮೇಳನ ನಡೆಸಲು ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ.

Write A Comment