ಕರಾವಳಿ

ನರೇಶ್ ಶೆಣೈಯನ್ನು ಮಂಪರು ಪರೀಕ್ಷೆಗೊಳಪಡಿಸಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಮನವಿ

Pinterest LinkedIn Tumblr

Naresh_shenai_Court_1

ಮಂಗಳೂರು: ಆರ್ ಟಿ ಐ ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರವಿವಾರ ಪೊಲೀಸರು ಬಂಧಿಸಿರುವ ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈಗೆ ಮಂಪರು ಪರೀಕ್ಷೆ ಸೇರಿದಂತೆ ಬ್ರೈನ್ ಮ್ಯಾಪಿಂಗ್‌,ಸುಳ್ಳು ಪತ್ತೆ ಪರೀಕ್ಷೆಗೆ ಅವಕಾಶ ನೀಡಬೇಕು ಎಂದು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.

ಈ ಕೊಲೆಗೆ ಸಂಬಂಧಪಟ್ಟ ಹೆಚ್ಚಿನ ತನಿಖೆ ನಡೆಸುವ ಹಿನ್ನೆಲೆಯಲ್ಲಿ ನರೇಶ್ ಶೆಣೈಗೆ ಸುಳ್ಳು ಪತ್ತೆ ಪರೀಕ್ಷೆ, ಮಂಪರು ಪರೀಕ್ಷೆ ಹಾಗೂ ಬ್ರೈನ್ ಮ್ಯಾಪಿಂಗ್ ಪರೀಕ್ಷೆಯ ಅಗತ್ಯವಿದೆ ಎಂದು ಹೇಳಿರುವ ಪೊಲೀಸರು ಈ ಪರಿಕ್ಷೆಗೆ ಅವಕಾಶ ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.

ಈ ಮನವಿಯ ಬಗ್ಗೆ ನ್ಯಾಯಾಲಯ ಇನ್ನೂ ತೀರ್ಮಾನ ಕೈಗೊಂಡಿಲ್ಲ. ನರೇಶ್ ಶೆಣೈಯನ್ನು ಜೂ. 30ರಂದು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಅಂದು ಮಂಪರು ಪರೀಕ್ಷೆ ಬಗ್ಗೆ ನ್ಯಾಯಾಲಯ ತೀರ್ಮಾನ ಪ್ರಕಟಿಸುವ ಸಾಧ್ಯತೆ ಇದೆ ಎಂದು ಈ ಕೊಲೆ ಪ್ರಕರಣದ ತನಿಖಾಧಿಕಾರಿ ತಿಲಕ್‌ಚಂದ್ರ ಅವರು ಹೇಳಿದ್ದಾರೆ.

Comments are closed.