ಅಂತರಾಷ್ಟ್ರೀಯ

ವೀರ್ಯ ವೃದ್ಧಿ, ಬಾಯಿ ದುರ್ಗಂಧ ಮೊದಲಾದ ಸಮಸ್ಯೆಗಳಿಗೆ ಸಿಂಪಲ್ ಪರಿಹಾರ ಇಲ್ಲಿವೆ….

Pinterest LinkedIn Tumblr

32

ಇತ್ತೀಚೆಗೆ ನಗರ ಪ್ರದೇಶಗಳಲ್ಲಿ ಆರೋಗ್ಯ ಸಮಸ್ಯೆ ವೃದ್ಧಿಸುತ್ತಲೇ ಇದೆ. ನಮ್ಮ ಆರೋಗ್ಯದಲ್ಲಿ ಏನಾದರು ಸಣ್ಣ ಸಮಸ್ಯೆ ಉಂಟಾದರೆ ತಕ್ಷಣ ವೈದ್ಯರ ಬಳಿ ಹೋಗುತ್ತೀವಿ, ಆದರೆ ಮನೆ ಮದ್ದೇ ಪರಿಹಾರ ಎಂಬ ವಿಷಯವನ್ನು ನಾವು ಮರೆತುಬಿಟ್ಟಿದೀವಿ. ಹಾಗಾದರೆ ಕೆಲವೊಂದು ಉಪಯುಕ್ತ ಮಾಹಿತಿಗಳು ಇಲ್ಲಿವೆ.

ಉದ್ದು: ಉದ್ದಿನ ಬೇಳೆಯನ್ನು ಹುರಿದು ಹಾಲಿನಲ್ಲಿ ಬೇಯಿಸಿ ಸಕ್ಕರೆ, ಏಲಕ್ಕಿ ಸೇರಿಸಿ ಪಾಯಸ ಮಾಡಿ ಸೇವಿಸುವುದರಿಂದ ವೀರ್ಯ ವೃದ್ಧಿಯಾಗಿ ಶಾರೀರಿಕ ಬಲ ಹೆಚ್ಚವುದು. ಉದ್ದಿನ ಬೇಳೆ ತೊವ್ವೆಯನ್ನು ತಯಾರಿಸಿ ಊಟದ ಜತೆ ಸೇವಿಸುವುದರಿಂದ ಅಂಗಾಂಗಗಳು ಬಲಗೊಳ್ಳುವುವು.

ಕೊತ್ತಂಬರಿ: ಕೊತ್ತಂಬರಿ ಸೊಪ್ಪಿನ ರಸವನ್ನು ಹಣೆಗೆ ಲೇಪ ಹಾಕುವುದರಿಂದ ತಲೆನೋವು ನಿವಾರಣೆಯಾಗುವುದು. ಬರೀ ಕೊತ್ತಂಬರಿಸೊಪ್ಪನ್ನು ಬಾಯಿಯಲ್ಲಿ ಜಗಿಯುವುದರಿಂದ ಬಾಯಿಯಿಂದ ದುರ್ಗಂಧ ಬರುವುದಿಲ್ಲ. ಜತೆಗೆ ದಂತ ಕ್ಷಯವೂ ನಿವಾರಣೆಯಾಗುತ್ತದೆ.

ಕಿತ್ತಳೆ: ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಮುಖದಲ್ಲಿ ಕಲೆಯಿರುವ ಭಾಗದಲ್ಲಿ ಮೃದುವಾಗಿ ತಿಕ್ಕಬೇಕು. ಪ್ರತಿದಿನ ಹೀಗೆ ಮಾಡುತ್ತಿದ್ದರೆ ಮುಖದಲ್ಲಿನ ಮೊಡವೆಗಳು ಹಾಗೂ ಕಪ್ಪು ಕಲೆಗಳು ನಿವಾರಣೆಯಾಗುತ್ತವೆ.

ಮೆಣಸು: ಮೆಣಸನ್ನು ನುಣ್ಣಗೆ ಅರೆದು ವಸಡಿಗೆ ಹಚ್ಚುವುದರಿಂದ ಕೆಟ್ಟ ನೀರು ಸುರಿದುಹೋಗಿ ನೋವು ಕಡಿಮೆಯಾಗುವುದು.

ಅಡುಗೆ ಉಪ್ಪು: ಒಂದು ಬಟ್ಟಲು ಬಿಸಿನೀರಿನಲ್ಲಿ ಅರ್ಧ ಟೀ ಚಮಚ ಉಪ್ಪನ್ನು ಕರಗಿಸಿ ನಂತರ ಈ ನೀರಿನಿಂದ ಬಾಯಿ ಮುಕ್ಕಳಿಸುವುದರಿಂದ ಬಾಯಿ ಹುಣ್ಣು ಶಮನವಾಗುತ್ತದೆ.

ಮಾವು: ಹುಣಸೆ ಚಿಗುರು ಮತ್ತು ಎಳೆ ಮಾವಿನಕಾಯಿಯನ್ನು ಬೇಯಿಸಿಕೊಂಡು ತಿಂದರೆ ಮೂಲವ್ಯಾಧಿ ಗುಣವಾಗುತ್ತದೆ. ಹಣ್ಣನ್ನು ಹಿತಮಿತವಾಗಿ ತಿಂದರೆ ವಾಯು ಶಮನಗೊಳ್ಳುವುದು. ವಾತ-ಪಿತ್ತ ನಾಶಗೊಳಿಸಿ ಹೃದಯಕ್ಕೆ ಹಿತವಾಗುವುದು.ಉಪ್ಪು ಮತ್ತು ಜೇನುತುಪ್ಪವನ್ನು ನಂಚಿಕೊಡು ಮಾವಿನಕಾಯಿ ಹೀಚು ತಿಂದರೆ ಮಲಬದ್ಧತೆ ಮತ್ತು ಅಜೀರ್ಣ ನಿವಾರಣೆಯಾಗುವುದು.

ಕಡಲೇಕಾಯಿ: ಒಂದು ಚಮಚ ಕಡಲೇಕಾಯಿ ಎಣ್ಣೆಗೆ ಅಷ್ಟೇ ಪ್ರಮಾಣದ ನಿಂಬೆ ರಸ ಬೆರೆಸಿ ರಾತ್ರಿ ಮುಖಕ್ಕೆ ಲೇಪಿಸುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.ಗೋಧಿ ಹಿಟ್ಟು ಬೆರೆಸಿದ ರೊಟ್ಟಿಯು ಮಧುಮೇಹಿಗಳಿಗೆ ಹಿತ.

ಪಪಾಯ: ಪರಂಗಿಹಣ್ಣಿನ ಜತೆ ಹಾಲು ಮತ್ತು ಜೇನುತುಪ್ಪ ಸೇರಿಸಿ ಸೇವಿಸುವುದರಿಂದ ಹೃದಯ ದೌರ್ಬಲ್ಯ ನಿವಾರಣೆಯಾಗಿ ಹೊಸ ಚೈತನ್ಯ ಮೂಡುವುದು. ಹಾಲುಣಿಸುವ ತಾಯಂದಿರು ಹಣ್ಣನ್ನು ನಿಯಮಿತವಾಗಿ ಬಳಸುವುದರಿಂದ ಶಕ್ತಿ ಹೆಚ್ಚುವುದು. ಊಟದ ನಂತರ ಹಣ್ಣನ್ನು ಸೇವಿಸುವುದರಿಂದ ಆಹಾರ ಚೆನ್ನಾಗಿ ಜೀರ್ಣವಾಗುವುದು.

ಸೇಬು: ಸೇಬಿನ ಹಣ್ಣನ್ನು ತುಂಡುಮಾಡಿಕೊಂಡು ಉಪ್ಪು ಸಹಿತ ನಿರಂತರ ಸೇವಿಸುವುದರಿಂದ ತಲೆನೋವು ಕಡಿಮೆಯಾಗುತ್ತದೆ. ಸೇಬಿನ ತಿರುಳನ್ನು ಅರೆದು ಮುಖಕ್ಕೆ ಲೇಪಿಸಿಕೊಂಡರೆ ಮೊಡವೆಗಳು ನಿವಾರಣೆಯಾಗಿ ಮುಖದ ಕಾಂತಿ ಹೆಚ್ಚುವುದು. ಊಟವಾದ ಬಳಿಕ ಸೇಬನ್ನು ತಿಂದರೆ ಜ್ಞಾಪಕ ಶಕ್ತಿ ಹೆಚ್ಚುವುದು.

ಅಂಜೂರ: ಅಂಜೂರದ ಹಣ್ಣುಗಳ ಸೇವನೆಯಿಂದ ಅಧಿಕ ಕೆಲಸದಿಂದ ಉಂಟಾದ ದೈಹಿಕ ಮತ್ತು ಮಾನಸಿಕ ಒತ್ತಡ ನಿವಾರಣೆಯಾಗುವುದು. ನವ ಚೈತನ್ಯ ಮೂಡುವುದು. ಈ ಹಣ್ಣಿನಲ್ಲಿ ನಾರಿನಾಂಶವಿರುವುದರಿಂದ ಮಲಬದ್ಧತೆ ಶಮನವಾಗುವುದು. ಮೂಲವ್ಯಾಧಿಯಿಂದ ಬಳಲುವವರು ಮೂರು ಅಂಜೂರದ ಹಣ್ಣುಗಳನ್ನು ರಾತ್ರಿ ನೆನೆಸಿಟ್ಟು ಬೆಳಿಗ್ಗೆ ಎದ್ದ ಕೂಡಲೇ ಹಣ್ಣುಗಳನ್ನು ತಿಂದು ಆ ನೀರು ಕುಡಿದರೆ ಗುಣವಾಗುವುದು.

Comments are closed.