ತೈವಾನ್: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್ ಬೆಂಕಿಗಾಹುತಿಯಾಗಿ 26 ಮಂದಿ ಸಜೀವ ದಹನವಾಗಿರುವ ಘಟನೆ ತೈವಾನ್ನಲ್ಲಿ ನಡೆದಿದೆ. ಘಟನೆ ಇಲ್ಲಿನ ಟಾವೊಯುವಾನ್ ಪ್ರಾಂತ್ಯದ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಎಕ್ಸ್ಪ್ರೆಸ್ ಹೈವೇನಲ್ಲಿ ಘಟನೆ ಸಂಭವಿಸಿದೆ.
ಘಟನೆಯಲ್ಲಿ 26 ಮಂದಿ ಸಾವನ್ನಪ್ಪಿರುವುದು ಪ್ರಾಥಮಿಕ ವರದಿಯಲ್ಲಿ ಖಚಿತಗೊಂಡಿದೆ ಎಂದು ಚೀನಾದ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಎಕ್ಸ್ಪ್ರೆಸ್ ಹೈವೇನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ತಡೆಗೋಡೆಗೆ ಅಪ್ಪಳಿಸಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ, ಬೆಂಕಿ ಹೊತ್ತಿಕೊಂಡ ಬಳಿಕ ತಡೆಗೋಡೆಗೆ ಅಪ್ಪಳಿಸಿದೆ ಎಂದೂ ಹೇಳಲಾಗುತ್ತಿದೆ. ಘಟನೆಯಲ್ಲಿ ಬಸ್ ಬೆಂಕಿಯಿಂದಾಗಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
Comments are closed.