ಅಂತರಾಷ್ಟ್ರೀಯ

ಗುರುಪೂರ್ಣಿಮೆ ಮಹತ್ವವನ್ನು ಒಮ್ಮೆ ತಿಳಿದುಕೊಳ್ಳಿ ….

Pinterest LinkedIn Tumblr

guru

ಬೆಂಗಳೂರು: ಆಷಾಢಮಾಸದ ಹುಣ್ಣಿಮೆ ದಿನ ನಾವು ಆಚರಿಸುವ ಶ್ರೇಷ್ಠವಾದ ಹಬ್ಬವೆಂದರೆ ಗುರುಪೂರ್ಣಿಮೆ. ಈ ದಿನ ನಾವು ನಮ್ಮ ಗುರುಗಳಿಗೆ ವಂದನೆ ಸಲ್ಲಿಸುವ ದಿನ. ಗುರುವಿನ ಮಹತ್ವವನ್ನು ಸಾರುವ ದಿನ. ಗುರು ನಮಗೆ ಜೀವನದಲ್ಲಿ ಸರಿಯಾದ ದಿಕ್ಕು ಸೂಚಿಸುವ, ನಮ್ಮ ಕೈ ಹಿಡಿದು ನಡೆಸುವ, ಪರಮಾತ್ಮನ ಅರಿವನ್ನು ತಿಳಿಯಲು ನಮ್ಮೊಳಗಿರುವ ನಮ್ಮ ಆತ್ಮವನ್ನು ಜಾಗೃತಿಗೊಳಿಸುವ ಮಹತ್ವದ ವ್ಯಕ್ತಿ.

ಆಧ್ಯಾತ್ಮದ ಹಾದಿಯಲ್ಲಿ ನಮ್ಮನ್ನು ನಡೆಸಿ ನಮ್ಮ ಗುರಿ ಮುಟ್ಟಲು ಸಹಾಯ ಮಾಡುವವನೇ ಗುರು. ಹುಡುಕಿದರೆ ಸಿಗುವವನಲ್ಲ. ನಮ್ಮನ್ನು ಹುಡುಕಿ ನಾವು ಕಾಣುವ ಮಟ್ಟಿಗೆ ಸಾಧನೆ ಮಾಡಿದರೆ ತಾನಾಗೇ ನಮ್ಮ ಬಳಿಗೆ ಬರುವವನು. ನಾವು ಗುರುವಿನ ಮುಖಾಂತರವೇ ಪರಮಾತ್ಮನ ಅರಿವು ಪಡೆಯಬೇಕಾಗಿರುವುದರಿಂದ ನಾವು ಆಷಾಢ ಪೌರ್ಣಮಿಯಂದು ಮಾತ್ರ ಗುರುವನ್ನು ಪೂಜಿಸದೆ ಅನುದಿನ, ಅನುಕ್ಷಣ ಗುರುವನ್ನು ಅಂತರಂಗದಲ್ಲಿ ಪೂಜಿಸುತ್ತ ನಮ್ಮನ್ನು ನಾವು ಸಮರ್ಥಿಸಿಕೊಳ್ಳಬೇಕು.

ಹೀಗೆ ನನ್ನದೇನೂ ಇಲ್ಲವೆಂಬ ಭಾವ ನಮ್ಮಲ್ಲಿ ಸದಾ ಜಾಗೃತವಾಗಿಟ್ಟುಕೊಂಡು ಗುರುವಿನಲ್ಲಿ ಶರಣಾದರೆ ಮಾತ್ರ ನಮ್ಮ ಗುರಿ ಮುಟ್ಟುವ ಪ್ರಯತ್ನ ಸಫಲವಾಗುತ್ತದೆ. ಉಪನಿಷತ್ತಿನ ಪ್ರಕಾರ ಗು ಎಂದರೆ ಅಂಧಕಾರವೆಂದು, ರು ಎಂದರೆ ಕ್ರೂಢೀಕರಿಸುವ ಅಥವಾ ಅಜ್ಞಾನದ ಅಂಧಕಾರ ನಿವಾರಿಸಿ ಜ್ಞಾನದ ಹಾದಿಗೆ ನಡೆಸುವವ ಎಂದು ಅರ್ಥವಾಗುತ್ತದೆ. ಸಂಸ್ಕøತದಲ್ಲಿ ಗುರು ಎಂಬ ಪದಕ್ಕೆ ಭಾರವಾದ ಎಂಬ ಅರ್ಥವೂ ಇದೆ ಎನ್ನುತ್ತಾರೆ. ಯಾರು ಜ್ಞಾನದಿಂದ ಭಾರವಾಗಿರುವನೋ ಅವನೇ ಗುರು ಎಂದು ಅರ್ಥೈಸಬಹುದೇನೊ. ಸ್ಕಂದ ಪುರಾಣದ ಗುರು ಗೀತೆಯಲ್ಲಿ ಗುರುವನ್ನು ನಂದಾದೀಪದಂತೆ ಬೆಳಗುವ ಜ್ಯೋತಿಯಂತೆ ಎಂದು ಗುರುವಿನ ಹಿರಿಮೆಯನ್ನು ವಿಸ್ತಾರವಾಗಿ ತಿಳಿಸಲಾಗಿದೆ. ಆದಿಗುರು ಶ್ರೀ ಶಂಕರಾಚಾರ್ಯರು ಗುರುಸ್ತೋತ್ರವನ್ನು ಹೀಗೆ ಹೇಳುತ್ತಾರೆ.
ಗುರುಬ್ರ್ರಹ್ಮಾ ಗುರುರ್ವಿಷ್ಣುಃ | ಗುರುರ್ದೇವೋ ಮಹೇಶ್ವರಃ|
ಗುರುಸ್ಸಾಕ್ಷಾತ್ ಪರಬ್ರಹ್ಮಃ| ತಸ್ಮೈಶ್ರೀ ಗುರುವೇ ನಮಃ||
ಗುರುವು ಬ್ರಹ್ಮ-ವಿಷ್ಣು-ಮಹೇಶ್ವರರ ಸ್ವರೂಪಿಯಾಗಿದ್ದು, ಅದಕ್ಕೂ ಮಿಗಿಲಾದ ಪರಬ್ರಹ್ಮ ತತ್ತ್ವವೇ ಆಗಿದ್ದಾನೆ. ಅಂತಹ ಗುರುವಿಗೆ ಪ್ರಣಾಮಗಳು ಎಂಬ ಅರ್ಥ ಬರುತ್ತದೆ. ನಮಗೆ ಸುಂದರ ಶರೀರ, ಅಪಾರ ಸಂಪತ್ತು, ಕೀರ್ತಿ, ಸಂಸಾರ ಎಲ್ಲವೂ ಇದ್ದರೂ ಗುರುವಿನ ಚರಣಗಳಲ್ಲಿ ಭಕ್ತಿ, ಶ್ರದ್ಧೆ ಇಲ್ಲದವನಿಗೆ ಮೋಕ್ಷವಿಲ್ಲ. ವೇದ, ಶಾಸ್ತ್ರ ಪಾರಂಗತನಾಗಿ ಅನೇಕ ವಿದ್ಯೆಗಳನ್ನು ತಿಳಿದವನೂ ಕೂಡ ಸದ್ಗುರುವಿನ ಚರಣಗಳಲ್ಲಿ ನಿಷ್ಠೆ ಇಡದಿದ್ದರೆ ಮುಕ್ತಿ ಇಲ್ಲ. ವಿದೇಶಗಳಲ್ಲಿ ತುಂಬ ಹೆಸರು ಮಾಡಿ ಸ್ವದೇಶದಲ್ಲಿ ಆಚಾರ ಪಾಲಿಸಿ ಎಲ್ಲರಿಗಿಂತ ಶ್ರೇಷ್ಠ ವ್ಯಕ್ತಿ ಎಂಬ ಹೆಸರು ಪಡೆದಿದ್ದರೂ ಸಹ ಗುರುಚರಣಗಳಲ್ಲಿ ಭಕ್ತಿ ಇಲ್ಲದವನ ಜೀವನ ನಿರರ್ಥಕ. ಭೂ ಮಂಡಲದಲ್ಲಿ ಅನೇಕರಿಂದ ಪಾದಪೂಜೆ ಮಾಡಿಸಿಕೊಳ್ಳುವಂತಹ ವ್ಯಕ್ತಿ ಏನಾದರೂ ಇದ್ದರೆ ಅವರು ಗುರುಗಳು ಮಾತ್ರ.

Comments are closed.