ಕರ್ನಾಟಕ

ಇನ್ಸ್`ಪೆಕ್ಟರ್ ಕಿರುಕುಳ ! ಮಹಿಳಾ ಪಿಎಸ್​ಐ ಆತ್ಮಹತ್ಯೆಗೆ ಯತ್ನ

Pinterest LinkedIn Tumblr

suicide

ಬೆಂಗಳೂರು: ನಿದ್ರೆ ಮಾತ್ರೆ ಸೇವಿಸಿ ಮಹಿಳಾ ಪಿಎಸ್ಐ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲೇ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಪಿಎಸ್ಐ ರೂಪಾ ಅವರಿಗೆ ರಾಜಾಜಿನಗರದ ಸುಗುಣಾ ಆಸ್ಪತ್ರೆಯಲ್ಲಿ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಹೇಳಲಾಗುತ್ತಿದೆ.

ಸಮವಸ್ತ್ರದಲ್ಲೇ ಪಿಎಸ್ಐ ರೂಪಾ ಆತ್ಮಹತ್ಯೆಗೆ ಯತ್ನಿಸಿದ್ಧಾರೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಜಯನಗರ ಇನ್ಸ್`ಪೆಕ್ಟರ್ ಸಂಜೀವ್ ಗೌಡ ಅವರು, ರೂಪಾಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ತಮಗೆ ಕಿರುಕುಳ ನೀಡುತ್ತಿರುವ ಬಗ್ಗೆ ಪತ್ನಿಗೆ ಕರೆ ಮಾಡಿ ತಿಳಿಸಿರುವ ರೂಪಾ, ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ಧಾರೆ. ನಿನ್ನೆ ಮಧ್ಯಾಹ್ನ, ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಿನ್ನೆ ಮಧ್ಯಾಹ್ನ 1 ಗಂಟೆ ರೂಪಾ ಅವರನ್ನ ವಿಚಾರಣೆಗೆ ಒಳಪಡಿಸಲಾಗಿತ್ತು. ಪಿಎಸ್`ಐ ರೂಪಾ ಮತ್ತು ಇನ್ಸ್`ಪೆಕ್ಟರ್ ನಡುವೆ ಮಾತಿನ ಚಕಮಕಿ ಸಹ ನಡೆದಿತ್ತು ಎಂದು ತಿಳಿದುಬಂದಿದೆ.

Comments are closed.