ಕರಾವಳಿ

ಕೆಎಸ್ಆರ್ಟಿಸಿ ಮುಷ್ಕರ; ಎರಡು ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Pinterest LinkedIn Tumblr

?????????????????????????????????????????????????????????????????????????????????????????????????????????

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬಿಎಂಟಿಸಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎರಡು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಾರಿಗೆ ಸಂಸ್ಥೆಯ ಯೂನಿಯನ್‍ಗಳು ಸಿದ್ಧತೆ ನಡೆಸಿದ್ದು, ಶಾಲಾ-ಕಾಲೇಜುಗಳಿಗೆ ರಜೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಬೆಂಗಳೂರು, ಮಂಡ್ಯ, ಮಳವಳ್ಳಿ, ಕೆಆರ್ ಪೇಟೆ, ಗದಗ, ರಾಯಚೂರು, ಚಿಕ್ಕಮಗಳೂರು, ಕೋಲಾರ ಸೇರಿದಂತೆ ರಾಜ್ಯದ ಸಾಕಷ್ಟು ಕಡೆ ಮುಷ್ಕರ ಆರಂಭವಾಗಿದ್ದು, ಕೆಎಸ್‍ಆರ್‍ಟಿಸಿ ಹಾಗೂ ಬಿಎಂಟಿಸಿ ಬಸ್‍ಗಳ ಸಂಚಾರ ಸ್ಥಗಿತಗೊಂಡಿದೆ.

ಶಾಲೆಗಳಿಗೆ ರಜೆ ನೀಡಿರುವ ಸಂಬಂಧ ಆಯಾ ಜಿಲ್ಲಾಧಿಕಾರಿಗಳು, ಶಿಕ್ಷಣಾಧಿಕಾರಿಗಳಿಗೆ ಸರ್ಕಾರಿ ಸುತ್ತೋಲೆ ಕಳುಹಿಸಲಾಗಿದೆ.

ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಮುಷ್ಕರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸರ್ಕಾರ ನಿರ್ಧರಿಸಿದ್ದು, ಮ್ಯಾಕ್ಸಿಕ್ಯಾಬ್‍ಗಳಿಗೆ ಎರಡು ದಿನಗಳ ಮಟ್ಟಿಗೆ ಪರವಾನಗಿ ನೀಡುವ ಸಾಧ್ಯತೆಯಿದೆ. ನಿಗಮದಲ್ಲಿ ಒಟ್ಟು 23 ಸಾವಿರ ಬಸ್‍ಗಳಿದ್ದು, 1.25 ಲಕ್ಷ ಸಿಬ್ಬಂದಿಗಳಿದ್ದಾರೆ. ಮುಷ್ಕರದಿಂದ ಜನ ಸಾಕಷ್ಟು ತೊಂದರೆ ಅನುಭವಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಿದ್ಧತೆ ನಡೆದಿದೆ.

Comments are closed.