ಕೂಡ್ಲಿಗಿ: ಕಾರು ಮತ್ತು ಲಾರಿ ಮಧ್ಯೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ಕೂ ಜನ ಸ್ಥಳದಲ್ಲೇ ಮೃತಪಟ್ಟ ಘಟನೆ ಕೂಡ್ಲಿಗಿ ತಾಲ್ಲೂಕಿನ ಶಿವಪುರ ಬಳಿ ರಾಷ್ಟೀಯ ಹೆದ್ದಾರಿ 50ರಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.
ಮೃತರು ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಮಂಜುನಾಥ ಹಡಪದ, ಶಿವಾನಂದ ಹಡಪದ, ಬಸವರಾಜ ಹಡಪದ ಹಾಗೂ ಕಿರಣ್ ವೀರೇಂದ್ರ ನಾವಿ ಎಂದು ತಿಳಿದು ಬಂದಿದೆ.
ಮೃತರೆಲ್ಲರು ನಿನ್ನೆ ಮೈಸೂರಿನಿಂದ ಹೊರಟು ಸಿಂದಗಿ ಕಡೆಗೆ ಹೋಗುತ್ತಿದ್ದರು. ಹೊಸಪೇಟೆ ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದಿವೆ. ಲಾರಿಯಡಿ ಸಿಕ್ಕಿಹಾಕಿಕೊಂಡ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ನಾಲ್ಕೂ ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Comments are closed.