ಕರಾವಳಿ

ಈಶ್ವರಪ್ಪರನ್ನು ಬಿಜೆಪಿಯ ಮುಂದಿನ ಮುಖ್ಯಮಂತ್ರಿ ಎಂದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ !!!

Pinterest LinkedIn Tumblr

eshwarappa

ಬೆಂಗಳೂರು: ಇಂದು ನಡೆದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಭೆಯಲ್ಲಿ ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪರನ್ನು ಮುಖ್ಯಮಂತ್ರಿಯಾಗಿಸುವ ಕುರಿತಂತೆ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಸಿಎಂ ಮಾಡುವ ಕುರಿತಂತೆ ಬ್ರಿಗೇಡ್‌ನಲ್ಲಿ ಚರ್ಚೆ ನಡೆದಿರುವುದು ಸತ್ಯ. ಮುಂಬರುವ ದಿನಗಳಲ್ಲಿ ಯಾವ ರೀತಿ ಬೆಳವಣಿಗೆಗಳಾಗಲಿವೆ ಎನ್ನುವುದನ್ನು ನೋಡಿ ಮುಂದಿನ ಹೆಜ್ಜೆ ಹಾಕುತ್ತೇವೆ ಎಂದು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ರಚನೆ ಕುರಿತಂತೆ ಕೆಲ ಹಿರಿಯ ವಕೀಲರೊಂದಿಗೆ ಚರ್ಚೆ ನಡೆಸಿದ ಈಶ್ವರಪ್ಪ, ಬ್ರಿಗೇಡ್‌ನ ರೂಪರೇಷೆಗಳು ಹೇಗಿರಬೇಕು ಎನ್ನುವ ಬಗ್ಗೆ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್,ಯಡಿಯೂರಪ್ಪ ಯಾವುದೇ ಬ್ರಿಗೇಡ್ ರಚನೆ ಬೇಡ, ಪಕ್ಷದೊಳಗೆ ಹಲವಾರು ಹಿಂದ ವಿಭಾಗಗಳಿವೆ ಅವುಗಳನ್ನು ಬಲಪಡಿಸಲು ಪ್ರಯತ್ನಿಸಿ ಎಂದು ಈಗಾಗಲೇ ಸಲಹೆ ನೀಡಿದ್ದಾರೆ.

ಆದರೆ, ಈಶ್ವರಪ್ಪ ಮಾತ್ರ ಆನೆ ನಡೆದಿದ್ದೆ ದಾರಿ ಎನ್ನುವಂತೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆ ಕುರಿತಂತೆ ಚಿಂತನೆ ನಡೆಸಿರುವುದು ಬಿಜೆಪಿಯಲ್ಲಿ ಬೂದಿ ಮುಚ್ಚಿದ ಕೆಂಡದಂತಹ ವಾತಾವರಣ ಸೃಷ್ಟಿಯಾಗಿದೆ ಎನ್ನಲಾಗುತ್ತಿದೆ.

Comments are closed.