ಕರ್ನಾಟಕ

ಕಾವೇರಿ ವಿವಾದ ಮತ್ತೆ ಕರ್ನಾಟಕಕ್ಕೆ ಹಿನ್ನಡೆ: ತಮಿಳುನಾಡಿಗೆ 15 ಸಾವಿರ ಕ್ಯೂಸೆಕ್ ನೀರು ಬಿಡಲು ಸುಪ್ರೀಂ ಆದೇಶ

Pinterest LinkedIn Tumblr

suprim

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ಹಿನ್ನಡೆಯುಂಟಾಗಿದ್ದು, ತಮಿಳುನಾಡಿಗೆ 15 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ಸೋಮವಾರ ಆದೇಶ ನೀಡಿದೆ.

ಕಾವೇರಿ ನದಿ ನೀರು ಕುರಿತಂತೆ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ದೀಪಕ್ ಮಿಶ್ರ ನೇತೃತ್ವದ ದ್ವಿಸದಸ್ಯ ಪೀಠವು, ಮುಂದಿನ 10 ದಿನಗಳ ಕಾಲ ತಮಿಳುನಾಡಿಗೆ 15 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯಕ್ಕೆ ಸೂಚನೆ ನೀಡಿದೆ.

ಜಲಮಾಪನ ಕೇಂದ್ರ ಬಿಳಿಗುಂಡ್ಲುಗೆ 10 ದಿನಗಳ ಕಾಲ 15 ಸಾವಿರ ಕ್ಯೂಸೆಕ್ ನೀರು ಅಂದರೆ, 1.29 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವಂತೆ ಆದೇಶಿಸಿದೆ. ಅಲ್ಲದೆ, ಈ ಹಿಂದೆ ನೀರು ಹಂಚಿಕೆ ಕುರಿತು ನ್ಯಾಯಾಧೀಕರಣ ನೀಡಿದ್ದ ಆದೇಶ ಕುರಿತಂತೆ 4 ದಿನಗಳೊಳಗಾಗಿ ಮೇಲ್ವಿಚಾರಣಾ ಸಮಿತಿಯನ್ನು ಸಂಪರ್ಕಿಸುವಂತೆ ತಮಿಳುನಾಡಿಗೆ ಸೂಚಿಸಿದೆ.

ಕರ್ನಾಟಕದಲ್ಲಿ ಪ್ರಸ್ತುತ ವರ್ಷ ಮುಂಗಾರು ಮಳೆಯ ಅಭಾವ ಉಂಟಾಗಿದ್ದು, ತಮಿಳುನಾಡಿಗೆ ಪಾಲಿನಷ್ಟು ನೀರನ್ನು ಬಿಡಲು ಸಾಧ್ಯವಿಲ್ಲ ಎಂದು ಈ ಹಿಂದೆ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿತ್ತು. ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದ ತಮಿಳುನಾಡು ಕೆಆರ್ ಎಸ್ ನಿಂದ 50 ಟಿಎಂಸಿ ಅಡಿ ನೀರು ಬೇಕೆಂದು ಹೇಳಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಿದೆ.

Comments are closed.