ಕರ್ನಾಟಕ

ಮಕ್ಕಳನ್ನು ಕಿಡ್ನಾಪ್ ಮಾಡಿ ವಿದೇಶಕ್ಕೆ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿರುವ ಮೈಸೂರು ಪೊಲೀಸರು; ಬಲೆಗೆ ಬಿದ್ದ ಪ್ರಮುಖ ಆರೋಪಿ ವೈದ್ಯೆ

Pinterest LinkedIn Tumblr

doctor-arrest

ಮೈಸೂರು: ಮಕ್ಕಳನ್ನು ಕಿಡ್ನಾಪ್ ಮಾಡಿ ವಿದೇಶಕ್ಕೆ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿರುವ ಮೈಸೂರು ಪೊಲೀಸರು ಗ್ಯಾಂಗ್ ನ ಕಿಂಗ್ ಪಿನ್ ಎನ್ನಲಾದ ವೈದ್ಯೆಯೊಬ್ಬಳನ್ನು ಬಂಧಿಸಿದ್ದಾರೆ.

ಮಂಡಿ ಮೊಹಲ್ಲಾದ ನಸೀಮ್ನರ್ಸಿಂಗ್ ಹೋಮ್ ನ ಡಾಕ್ಟರ್ಉಷಾ ಎನ್ನುವಾಕೆ ಮಕ್ಕಳನ್ನ ಕಳ್ಳತನ ಮಾಡಿಸಿ ಮಾರಾಟ ಮಾಡುವ ಕಿಂಗ್ ಪಿನ್ ಎನ್ನಲಾಗುತ್ತಿದೆ. ಕಳೆದ ಮೂರು ತಿಂಗಳಲ್ಲಿ ಈಕೆ ಸುಮಾರು 18 ಮಕ್ಕಳನ್ನು ಮಾರಾಟ ಮಾಡಿದ್ದಾಳೆ.

ಕಳೆದ ಮೂರು ತಿಂಗಳ ಹಿಂದೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಬಳಿ ಮಗುವೊಂದನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಪಹರಿಸಿದ್ದರು. ಇದನ್ನು ನೋಡಿದ ಸ್ಥಳೀಯರು ಮಗುವನ್ನು ರಕ್ಷಿಸಲು ಕಾರನ್ನು ಹಿಂಬಾಲಿಸಿದರು ಪ್ರಯೋಜನವಾಗಲಿಲ್ಲ, ಮಗುವಿನ ಜೊತೆ ದುಷ್ಕರ್ಮಿಗಳು ಪರಾರಿಯಾಗಿದ್ದರು. ಈ ಸಂಬಂಧ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ದೂರಿನ ಅನ್ವಯ ತನಿಖೆ ಆರಂಭಿಸಿದ ಪೊಲೀಸರಿಗೆ ಶಾಕ್ ಕಾದಿತ್ತು, ಮೈಸೂರಲ್ಲಿ ನಡೆಯುತ್ತಿದ್ದ ಮಕ್ಕಳ ಮಾರಾಟ ಜಾಲ ಪತ್ತೆಯಾಯಿತು.

ವಿಚಾರಣೆ ವೇಳೆ ಆರೋಪಿಗಳು ಕೊಟ್ಟ ಮಾಹಿತಿ ಮೇರೆಗೆ ಡಾಕ್ಟರ್ ಉಷಾ ಪಾತ್ರ ಸಾಬೀತಾಗಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀಮಂತರಿಗೆ ಮಕ್ಕಳನ್ನು ಮಾರಲು ಬಡ, ನಿರ್ಗತಿಕ, ಭಿಕ್ಷುಕ ಕುಟುಂಬಗಳನ್ನ ಟಾರ್ಗೆಟ್ ಮಾಡುತ್ತಿದ್ದ ಈಕೆ, ಪೋಷಕರ ಮನವೊಲಿಸಲು ಹಣದ ಆಮೀಷ ಒಡ್ಡುತ್ತಿದ್ದಳು. ಒಂದು ವೇಳೆ ಪೋಷಕರು ಒಪ್ಪದಿದ್ದರೇ ಸರಿಯಾದ ಸಮಯ ನೋಡಿ ಮಕ್ಕಳನ್ನು ಕಿಡ್ನಾಪ್ ಮಾಡಿಸುತ್ತಿದ್ದಳು ಎಂದು ವಿಚಾರಣೆ ವೇಳೆ ತಿಳಿಸಿದ್ದಾರೆ.

Comments are closed.