ಕರ್ನಾಟಕ

ಮಾಸ್ತಿಗುಡಿ ದುರಂತದಲ್ಲಿ ಮಡಿದ ಅನಿಲ್ – ಉದಯ್ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಸಿದ್ದರಾಮಯ್ಯ

Pinterest LinkedIn Tumblr

uday

ಬೆಂಗಳೂರು: ಮಾಸ್ತಿಗುಡಿ ಸಿನಿಮಾ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ಟಿ.ಜಿ ಹಳ್ಳಿ ಜಲಾಶಯಕ್ಕೆ ಬಿದ್ದು ಸಾವನ್ನಪ್ಪಿದ ಖಳನಟರಾದ ಅನಿಲ್ ಮತ್ತು ಉದಯ್ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದೆ.

ಸಿಎಂ ಸಿದ್ದರಾಮಯ್ಯ ಅನಿಲ್ ಮತ್ತು ಉದಯ್ ಕುಟುಂಬಕ್ಕೆ ತಲಾ ಐದು ಲಕ್ಷ ರೂ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯ ತಿಳಿಸಿದೆ.

ನವೆಂಬರ್ 7 ರಂದು ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಶೂಟಿಂಗ್ ವೇಳೆ ಹೆಲಿಕಾಪ್ಟರ್ ನಿಂದ ಜಲಾಶಯಕ್ಕೆ ಜಿಗಿದು ಇಬ್ಬರು ಖಳನಟರು ಸಾವನ್ನಪ್ಪಿದ್ದರು. ಮೂರು ದಿನಗಳ ನಂತರ ಇಬ್ಬರ ಶವ ಪತ್ತೆಯಾಗಿತ್ತು.
ಪ್ರಕರಣ ಸಂಬಂಧ ನಿರ್ಮಾಪಕ, ನಿರ್ದೇಶಕ, ಹಾಗೂ ಸಾಹಸ ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ.

Comments are closed.