ಕರ್ನಾಟಕ

ಜನಾರ್ದನ ರೆಡ್ಡಿ ಮಗಳ ಮದುವೆಗೆ ಹೋಗೋದು ಬೇಡ: ರಾಜ್ಯ ಬಿಜೆಪಿಗೆ ಹೈಕಮಾಂಡ್ ಸೂಚನೆ

Pinterest LinkedIn Tumblr

reddy-bjpಬೆಂಗಳೂರು: ರಾಜ್ಯ ಬಿಜೆಪಿ ನಾಯಕರು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮಗಳ ವಿವಾಹಕ್ಕೆ ಹೋಗುವುದು ಬೇಡ ಎಂದು ಬಿಜೆಪಿ ಹೈಕಮಾಂಡ್ ಸೂಚಿಸಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರ ಕಪ್ಪುಹಣದ ವಿರುದ್ಧ ಹೋರಾಟ ನಡೆಸುತ್ತಿದೆ. ಇಂತಹ ಸಮಯದಲ್ಲಿ ಜನಾರ್ದನ ರೆಡ್ಡಿ ಪುತ್ರಿ ಬ್ರಹ್ಮಿಣಿಯ ಅದ್ಧೂರಿ ವಿವಾಹಕ್ಕೆ ಹೋಗುವುದು ಸರಿಯೇ ಎಂಬ ಮಾತುಗಳು ಕೇಳಿಬಂದಿದ್ದು, ಇದೀಗ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರಿಗೆ ಮದುವೆಗೆ ಹೋಗದಂತೆ ಸೂಚಿಸಿದೆ.
ಜನಾರ್ದನ ರೆಡ್ಡಿ ಅವರು ತಮ್ಮ ಮಗಳ ವಿವಾಹಕ್ಕೆ ಕಪ್ಪುಹಣ ಬಳಕೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸಹ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರೆಡ್ಡಿ ಮದುವೆಯಲ್ಲಿ ಭಾಗವಹಿಸಿದಂತೆ ಫರ್ಮಾನು ಹೊರಡಿಸಿದೆಯಂತೆ.
ನವೆಂಬರ್ 15 ಮತ್ತು 16ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬ್ರಹ್ಮಿಣಿ ಮದುವೆ ಅದ್ಧೂರಿಯಾಗಿ ನಡೆಯುತ್ತಿದ್ದು, ಮದುವೆ ಸುಮಾರು 500 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂಬ ಸುದ್ದಿಗಳು ವರದಿಯಾಗಿತ್ತು. ವಿವಾಹದ ಒಂದು ಲಗ್ನ ಪತ್ರಿಕೆಗೆ 2.50 ಲಕ್ಷ ರುಪಾಯಿ ವೆಚ್ಚ ಮಾಡಲಾಗಿತ್ತು ಎಂದು ಮಾದ್ಯಮಗಳು ವರದಿ ಮಾಡಿದ್ದವು. ಹೀಗೆ ಅದ್ಧೂರಿತನದಲ್ಲಿ ನಡೆಯುತ್ತಿರುವ ಮದುವೆಗೆ ಬಿಜೆಪಿ ನಾಯಕರು ಗೈರಾಗಲಿದ್ದಾರೆ.

Comments are closed.