ನವದೆಹಲಿ: ಕಾವೇರಿ ಐತೀರ್ಪಿನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಗೆ ಅರ್ಹ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಕಾವೇರಿ ಐ ತೀರ್ಪು ಪ್ರಶ್ನಿಸಿ ಕರ್ನಾಟಕ ಸೇರಿದಂತೆ 3 ರಾಜ್ಯಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎ ಎಂ ಖಾನ್ ವಿಲ್ಕರ್, ದೀಪಕ್ ಮಿಶ್ರಾ, ಅಮಿತವ್ ರಾಯ್ ನೇತೃತ್ವದ ತ್ರಿಸದಸ್ಯ ಪೀಠ ಇಂದು ತನ್ನ ಮಹತ್ವದ ಆದೇಶ ನೀಡಿದ್ದು, ಮೇಲ್ಮನವಿ ಅರ್ಜಿ ವಿಚಾರಣೆಗೆ ಅರ್ಹ ಎಂದು ಅಭಿಪ್ರಾಯ ಪಟ್ಟಿದೆ. ಅಲ್ಲದೆ ವಿಚಾರಣೆಯನ್ನು ಡಿಸೆಂಬರ್ 15ರಿಂದ ವಿಚಾರಣೆಗೆ ತೆಗೆದುಕೊಳ್ಳುವುದಾಗಿ ನ್ಯಾಯಪೀಠ ಘೋಷಣೆ ಮಾಡಿದೆ.
ಅಂತೆಯೇ ಈ ಹಿಂದೆ ತಾನು ನೀಡಿದ್ದ ಮಧ್ಯಂತರ ಆದೇಶವನ್ನು ಮುಂದುವರೆಸಿರುವ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ನಿತ್ಯ 2 ಸಾವಿರ ಕ್ಯೂಸೆಕ್ಸ್ ನೀರು ಹರಿಸುವ ತನ್ನ ಆದೇಶವನ್ನು ಮುಂದುವರೆಸುವಂತೆ ಮಹತ್ವದ ತೀರ್ಪು ನೀಡಿದೆ.
Comments are closed.