ಕರ್ನಾಟಕ

ಕಾರ್ತಿಕ್‌ ಗೌಡ ವಿರುದ್ಧದ ವಂಚನೆ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

Pinterest LinkedIn Tumblr

karthik2222

ಬೆಂಗಳೂರು: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಪುತ್ರ ಕಾರ್ತಿಕ್ ಗೌಡ ಅವರ ವಿರುದ್ಧದ ವಂಚನೆ ಪ್ರಕರಣವನ್ನು ಹೈಕೋರ್ಟ್‌ ರದ್ದುಗೊಳಿಸಿದೆ.

ತಮ್ಮನ್ನು ವಿವಾಹವಾಗಿ ವಂಚಿಸಿದ್ದಾರೆಂದು ನಟಿ ಮೈತ್ರಿಯಾ ಗೌಡ ಅವರು ಕಾರ್ತಿಕ್ ಗೌಡ ವಿರುದ್ಧ ಆರ್‌.ಟಿ. ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣವನ್ನು ರದ್ದುಪಡಿಸಬೇಕೆಂದು ಕೋರಿ ಕಾರ್ತಿಕ್‌ ಗೌಡ ಹೈಕೋರ್ಟ್‌ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣವನ್ನು ರದ್ದುಗೊಳಿಸಿ ಆದೇಶ ನೀಡಿದೆ.

Comments are closed.