ಕರ್ನಾಟಕ

ಸೋಲಿಲ್ಲದ ಸರದಾರ ! 5 ಬಾರಿ ಶಾಸಕರಾಗಿದ್ದ ಮಹದೇವ ಪ್ರಸಾದ್‌ ಅಜಾತಶತ್ರು

Pinterest LinkedIn Tumblr

mahadeva2121

ಬೆಂಗಳೂರು: ಇಂದು ಬೆಳಗ್ಗೆ ನಿಧನರಾದ ಮಹದೇವ ಪ್ರಸಾದ್‌ ಅವರು ಐದು ಬಾರಿ ಶಾಸಕರಾಗಿದ್ದರು. ಎಲ್ಲರೊಂದಿಗೂ ಆತ್ಮೀಯರಾಗಿ ಬೆರೆಯುತ್ತಿದ್ದ ಅವರು ಅಜಾತ ಶತ್ರುವಾಗಿದ್ದರು.

ಮಹದೇವ ಪ್ರಸಾದ್‌, 1958 ಆಗಸ್ಟ್‌ 5 ರಂದು ಗುಂಡ್ಲುಪೇಟೆಯಲ್ಲಿ ಜನಿಸಿದರು. ಅವರ ಪೂರ್ಣ ಹೆಸರು ಹಾಲಹಳ್ಳಿ ಶ್ರೀಕಾಂತ ಶೆಟ್ಟಿ ಮಹದೇವ ಪ್ರಸಾದ್‌.

5 ಬಾರಿ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ಪ್ರಸ್ತುತ ಅವರು ಸಕ್ಕರೆ ಮತ್ತು ಸಹಕಾರ ಸಚಿವರು ಹಾಗೂ ಚಾಮರಾಜನಗರದ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು.

ಮಹದೇವ ಪ್ರಸಾದ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರಾಗಿದ್ದರು.

ಜನತಾ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಅವರು ನಂತರದ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದರು. ಈ ಹಿಂದೆ ಆಹಾರ ಮತ್ತು ನಾಗರಿಕ ಸರಬರಾಜು , ಕನ್ನಡ ಮತ್ತು ಸಂಸ್ಕೃತಿ ಖಾತೆಗಳನ್ನು ನಿರ್ವಹಿಸಿದ್ದರು.

Comments are closed.