ಬೆಂಗಳೂರು: 1960ರ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ ತಿದ್ದುಪಡಿ ತಂದು ರಾಜ್ಯದಲ್ಲಿ ಕಂಬಳ ಮತ್ತು ಚಕ್ಕಡಿ ಓಟದ ಸ್ಪರ್ಧೆಗೆ ರಾಜ್ಯದಲ್ಲಿ ಅವಕಾಶ ಕಲ್ಪಿಸುವ ಮಸೂದೆ ಮಂಡಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಸಂಪುಟ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಕಾನೂನು ಸಚಿವ ಟಿ.ಬಿ. ಜಯಚಂದ್ರ, ತಿದ್ದುಪಡಿ ಮಸೂದೆಯನ್ನು ಫೆಬ್ರವರಿ 6ರಿಂದ ನಡೆಯಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು ಎಂದರು. ಅಧಿವೇಶನದಲ್ಲಿ ಕಾಯಿದೆ ಪಾಸು ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಹೇಳಿದ್ದಾರೆ.
ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ – ಕರ್ನಾಟಕ ತಿದ್ದುಪಡಿ ಮಸೂದೆ 2017 ಮಂಡಿಸಲು ಸಾಧ್ಯವಾಗುವಂತೆ ಪಶು ಸಂಗೋಪನಾ ಇಲಾಖೆ ಸಲ್ಲಿಸಿದ ಪ್ರಸ್ತಾವನೆಗೆ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು ಎಂದೂ ಅವರು ವಿವರಿಸಿದರು. ಇದೊಂದು ಸಾಂಪ್ರಾದಾಯಿಕ ಕ್ರೀಡೆಯಾಗಿದ್ದು ಮಸೂದೆ ಪಾಸು ಮಾಡಲು ಎಲ್ಲರು ಸಹಕರಿಸಬೇಕು ಎಂದು ಅವರು ಹೇಳಿದ್ದಾರೆ.
Comments are closed.