ಕರ್ನಾಟಕ

ವಿಧಾಸಭೆಯಲ್ಲಿ ‘ಕಂಬಳ’ ತಿದ್ದುಪಡಿ ಮಸೂದೆ ಮಂಡಿಸಿದ ರಾಜ್ಯ ಸರ್ಕಾರ

Pinterest LinkedIn Tumblr

ಬೆಂಗಳೂರು: ರಾಜ್ಯ ಸರ್ಕಾರ ಕಂಬಳ ಮತ್ತು ಎತ್ತಿನ ಬಂಡಿ ಓಟಕ್ಕೆ ಕಾನೂನು ಮಾನ್ಯತೆ ದೊರಕಿಸಿ ಕೊಡಲು ಅನುವಾಗುವಂತೆ ಶುಕ್ರವಾರ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವ ತಿದ್ದುಪಡಿ ಮಸೂದೆ 2017 ಅನ್ನು ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದೆ.

ರಾಜ್ಯದಲ್ಲಿ ಕಂಬಳ ಮತ್ತು ಎತ್ತಿನ ಬಂಡಿ ಓಟ ನಡೆಸಲು ಅನುವಾಗುವಂತೆ ಕೇಂದ್ರ ಅಧಿನಿಯಮ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವ ಕಾಯ್ದೆ-1960ಕ್ಕೆ ತಿದ್ದುಪಡಿ ತರಲಾಗುತ್ತಿದೆ.

ತಿದ್ದುಪಡಿ ವಿಧೇಯಕವನ್ನು ಸಮರ್ಥಿಸಿಕೊಂಡ ಸರ್ಕಾರ, ಇದೊಂದು ಜಾನಪದ ಕ್ರೀಡೆಯಾಗಿದ್ದು, ಈ ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ರಕ್ಷಿಸುವ ಉದ್ದೇಶದಿಂದ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ ಎಂದು ಹೇಳಿದೆ.

Comments are closed.