ಉಡುಪಿ: ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಆಟೋವನ್ನು ತಪ್ಪಿಸಲು ಹೋಗಿ, ನಿಯಂತ್ರಣ ತಪ್ಪಿದ ಬಸ್ ಮರಕ್ಕೆ ಡಿಕ್ಕಿಯಾದ ಘಟನೆ ಉಡುಪಿಯ ಕಾರ್ಕಳ ತಾಲೂಕಿನ ಕುಕ್ಕುಂದೂರು ಎಂಬಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಮಾರಮ್ಮ ದೇವಿ ಗ್ರಾಮಂತರ ಪ್ರೌಢ ಶಾಲೆಯ ವಿದ್ಯಾರ್ಥಿಗಳಿದ್ದ ಬಸ್ ಇದಾಗಿದ್ದು ಬಸ್ಸಿನಲ್ಲಿದ್ದ 7 ಮಂದಿ ವಿದ್ಯಾರ್ಥಿಗಳಿಗೆ ಗಾಯಗಳಾಗಿದೆ.

ಅಪಘಾತದಲ್ಲಿ ಆಟೋ ಚಾಲಕ ಹಾಗೂ ಇಬ್ಬರು ಪ್ರಾಯಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಪ್ರವಾಸಿ ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳ ಪೈಕಿ ಗಾಯಗೊಂಡ ಇಬ್ಬರು ಮಕ್ಕಳನ್ನು ಮಣಿಪಾಲ ಆಸ್ಪತ್ರೆಗೆ ಹಾಗೂ ಉಳಿದವರನ್ನ ಕಾರ್ಕಳ ಸರಕಾರಿ ಅಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾರ್ಕಳ ಗ್ರಾಮಂತರ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
Comments are closed.