ಕರ್ನಾಟಕ

ಬಶೀರ್ ಹತ್ಯೆ ಪ್ರಕರಣ: ಶವದ ಮೇಲೆ ಯಾರೂ ರಾಜಕಾರಣ ಮಾಡಬೇಡಿ: ಸಿಎಂ ಸಿದ್ದರಾಮಯ್ಯ

Pinterest LinkedIn Tumblr

ಬೆಂಗಳೂರು: ಶವದ ಮೇಲೆ ಯಾರೂ ರಾಜಕಾರಣ ಮಾಡಬಾರದು. ಸತ್ತ ಸಂದರ್ಭದಲ್ಲಿ ಎಲ್ಲರೂ ಸಾಂತ್ವನ ಹೇಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.

ಮಂಗಳೂರಿನಲ್ಲಿ ದುಷ್ಕರ್ಮಗಳಿಂದ ಹಲ್ಲೆಗೊಳಗಾಗಿ ಹತ್ಯೆಗೀಡಾಗಿರುವ ಬಶೀರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ದ್ವೇಷ ರಾಜಕಾರಣಕ್ಕೆ ಕೊನೆಯೇ ಇಲ್ಲ. ಯಾರೂ ಶವದ ಮೇಲೆ ರಾಜಕಾರಣ ಮಾಡಬಾರದು. ಧಾರ್ಮಿಕ ಭಾವನೆಗಳನ್ನು ಕೆರಳಿಸುವುದರಿಂದ ಸಮಾಜಕ್ಕೆ ಹಾನಿಯಾಗುತ್ತದೆ. ಇದರಿಂದ ಯಾರಿಗೂ ಲಾಭವಾಗದು ಎಂದು ಹೇಳಿದ್ದಾರೆ.

ಮನುಷ್ಯತ್ವ ಇಲ್ಲದವರು ಇಂತಹ ಕೃತ್ಯಗಳನ್ನು ಮಾಡುತ್ತಾರೆ, ಬಶೀರ್ ಸಾವಿನಿಂದ ವೈಯಕ್ತಿಕವಾಗಿ ನೋವಾಗಿದೆ. ಪ್ರಸ್ತುತ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದ್ದು, ಕ್ರಮ ಕೈಗೊಳ್ಳಲಾಗುತ್ತಿದೆ. ಸಮಾಜದಲ್ಲಿ ಸಾಮರಸ್ಯ ಕಾಪಾಡಲು ಎಲ್ಲರೂ ಕೈಜೋಡಿಸಬೇಕು. ಇಂತಹ ಕೃತ್ಯಗಳನ್ನು ಪಕ್ಷಾತೀತವಾಗಿ ಎಲ್ಲರೂ ಖಂಡಿಸಬೇಕು. ಪಕ್ಷಗಳು, ಸಂಘಟನೆಗಳು ಘರ್ಷಣೆಗೆ ಪ್ರಚೋದಿಸಬಾರದು ಎಂದು ಹೇಳಿರುವ ಸಿದ್ದರಾಮಯ್ಯ ಅವರು ಶಾಂತಿ ಕಾಪಾಡುವಂತೆ ಜನತೆ ಬಳಿ ಮನವಿ ಮಾಡಿಕೊಂಡಿದ್ದಾರೆ.

ಬಶೀರ್ ಕುಟುಂಬಕ್ಕೆ ರೂ.10 ಲಕ್ಷ ಪರಿಹಾರ ಘೋಷಣೆ
ಮಂಗಳೂರಿನಲ್ಲಿ ದುಷ್ಕರ್ಮಗಳಿಂದ ಹಲ್ಲೆಗೊಳಗಾಗಿ ಮೃತಪಟ್ಟಿರುವ ಬಶೀರ್ ಕುಟುಂಬಕ್ಕೆ ರಾಜ್ಯ ಸರ್ಕಾರ ಭಾನುವಾರ ರೂ.10 ಲಕ್ಷ ಪರಿಹಾರ ಘೋಷಣೆ ಮಾಡಿದೆ.

ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದಿಂದ ತಲಾ ರೂ.10 ಲಕ್ಷ ಪರಿಹಾರವನ್ನು ಬಶೀರ್ ಕುಟುಂಬಕ್ಕೆ ನೀಡಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ತಿಳಿಸಿದ್ದಾರೆ.

Comments are closed.