ಕರಾವಳಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಆಪ್ ಆಧಾರಿತ ಕ್ಯಾಬ್ ಸೇವೆ : ಜೊತೆಗೆ ನಿಲ್ದಾಣ್ದದಲ್ಲಿ ಮಲ್ಲಿಗೆಯ ಘಮಘಮ

Pinterest LinkedIn Tumblr

ಮಂಗಳೂರು, ಎಪ್ರಿಲ್,4: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೀಘ್ರದಲ್ಲೇ ಆ?ಯಪ್ ಆಧಾರಿತ ಕ್ಯಾಬ್ ಸೇವೆ ಪ್ರಯಾಣಿಕರಿಗೆ ಲಭ್ಯವಾಗಲಿದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕ ವಿ.ವಿ.ರಾವ್ ತಿಳಿಸಿದ್ದಾರೆ.

ಚೆನ್ನೈ ಹಾಗೂ ಗೋವಾ ಸೇರಿದಂತೆ ದೇಶದ ಐದು ವಿಮಾನ ನಿಲ್ದಾಣಗಳಲ್ಲಿ ಪ್ರಥಮ ಹಂತದಲ್ಲಿ ಆ?ಯಪ್ ಆಧಾರಿತ ಕ್ಯಾಬ್ ಸೇವೆ ಯಶಸ್ವಿಯಾಗಿದೆ.

ದ್ವಿತೀಯ ಹಂತದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಇದನ್ನು ಜಾರಿಗೆ ತರಲು ವಿಮಾನ ನಿಲ್ದಾಣ ಪ್ರಾಧಿಕಾರ ಮುಂದಾಗಿದೆ. ಈ ಬಗ್ಗೆ ಟೆಂಡರ್ ಪ್ರಕ್ರಿಯೆ ಆರಂಭಗೊಂಡಿದ್ದು, ಇನ್ನು ಒಂದು ತಿಂಗಳಲ್ಲಿ ಟೆಂಡರ್‌ನ್ನು ಅಂತಿಮಗೊಳಿಸಲಾಗುವುದು.

ವಿಮಾನ ನಿಲ್ದಾಣದಿಂದ ಕ್ಯಾಬ್ ಸೇವೆ ಆರಂಭಿಸುವುದರಿಂದ ಇಲ್ಲಿರುವ ಟೂರಿಸ್ಟ್ ಟ್ಯಾಕ್ಸಿಗಳು ಸ್ಪರ್ಧಾತ್ಮಕವಾಗಿ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲಿವೆ. ವಿಮಾನ ನಿಲ್ದಾಣ ಪ್ರಾಧಿಕಾರದ ನಿಯಮಾವಳಿಯಂತೆ ಕ್ಯಾಬ್ ಸೇವೆಗೆ ಅವಕಾಶ ಕಲ್ಪಿಸಲಾಗುವುದು. ಪ್ರಯಾಣಿಕರ ಗುಣಮಟ್ಟದ ಸೇವೆ ಹಾಗೂ ಸುರಕ್ಷತೆಯನ್ನು ಒದಗಿಸುವುದಕ್ಕೆ ವಿಮಾನ ನಿಲ್ದಾಣ ಪ್ರಾಧಿಕಾರ ಪ್ರಥಮ ಆದ್ಯತೆ ನೀಡುತ್ತದೆ ಎಂದವರು ಹೇಳಿದ್ದಾರೆ.

ನಿಲ್ದಾಣದಲ್ಲಿ ಮಲ್ಲಿಗೆ ಕಂಪು – ನಿಲ್ದಾಣ್ದದಲ್ಲಿ ಮಲ್ಲಿಗೆಯ ಸುವಾಸನೆ

ಮಂಗಳೂರು ಮಲ್ಲಿಗೆ ಅದರ ಪರಿಮಳಕ್ಕೆ ಅಂತಾರಾಷ್ಟ್ರೀಯವಾಗಿ ಖ್ಯಾತಿ ಪಡೆದಿದೆ. ಸ್ಥಳೀಯ ಹೂವಿನ ಕಂಪನ್ನು ಮಂಗಳೂರು ವಿಮಾನ ನಿಲ್ದಾಣದಲ್ಲೂ ಪ್ರಯಾಣಿಕರು ಪಡೆಯುವ ಸೌಲಭ್ಯವನ್ನು ಮಾಡಲಾಗಿದೆ.

ಮಂಗಳೂರು ವಿಮಾನ ನಿಲ್ದಾಣದೊಳಗೆ ಪ್ರವೇಶಿಸುವ ಪ್ರಯಾಣಿಕರನ್ನು ಮಲ್ಲಿಗೆಯ ಸುವಾಸನೆ ಸ್ವಾಗತಿಸಲಿದೆ. ಜತೆಗೆ ವಿಮಾನ ನಿಲ್ದಾಣದ ಒಳಹೊರಗು ಗೋಡೆಗಳಲ್ಲಿ ಮಂಗಳೂರಿನ ಪ್ರಾದೇಶಿಕತೆ, ಸಂಸ್ಕೃತಿಯನ್ನು ಸಾರುವ ಚಿತ್ರಪಟಗಳು ಆಕರ್ಷಿಸಲಿವೆ. ಇದಕ್ಕಾಗಿಯೇ ಸುಮಾರು 1 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದು ವಿಮಾನ ನಿಲ್ದಾಣ ನಿರ್ದೇಶಕ ವಿ.ವಿ.ರಾವ್ ತಿಳಿಸಿದ್ದಾರೆ.

Comments are closed.