ಕರಾವಳಿ

ಮಂಗಳೂರಿನಲ್ಲಿ ಮತ್ತೆ ಮಸಾಜ್ ಸೆಂಟರ್‌ಗೆ ಪೊಲೀಸರ ದಾಳಿ : ವೇಶ್ಯಾವಾಟಿಕೆ ಆರೋಪದಲ್ಲಿ ಮೂವರ ಬಂಧನ

Pinterest LinkedIn Tumblr

ಮಂಗಳೂರು: ನಗರದಲ್ಲಿ ಬಾಡಿ ಮಸಾಜ್ ಹೆಸರಿನಲ್ಲಿ ಕಾರ್ಯಾಚರಿಸುತ್ತಿರುವ ಮಸಾಜ್ ಸೆಂಟರ್ ಗಳಲ್ಲಿ ವೇಶ್ಯಾವಾಟಿಕೆಗೆ ಪ್ರಕರಣಗಳು ದಿನದಿಂದಕ್ಕೆ ಹೆಚ್ಚಾಗುತ್ತಿದ್ದು, ಪೊಲೀಸರು ಹಲವು ಬಾರಿ ಇಂತಹ ಅಡ್ಡೆಗಳಿಗೆ ದಾಳಿ ನಡೆಸಿದರೂ ಮತ್ತೆ ಮತ್ತೆ ಇಂತಹ ಅಕ್ರಮ ತಾಣಗಳು ತಲೆ ಎತ್ತಿ ನಿಲ್ಲುತ್ತಿದೆ.

ಮೊನ್ನೆ ತಾನೆ ನಗರದ ವಿಶ್ವಭವನ ಬಳಿ ಇದೇ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಹನ್ನೊಂದು ಮಂದಿಯನ್ನು ಬಂಧಿಸಿದ್ದರು. ಇದೀಗ ಮೂರು ದಿನಗಳ ಅಂತರದಲ್ಲಿ ಬಾನುವಾರ ಮತ್ತೆ ವೇಶ್ಯಾವಾಟಿಕೆಗೆ ಪ್ರೆರೇಪಿಸುತ್ತಿದ್ದ ಮಸಾಜ್ ಸೆಂಟರ್‌ ಮೇಲೆ ದಾಳಿ ನಡೆಸಿರುವ ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಬರ್ಕೆ ಠಾಣೆಯ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಇದೇ ವೇಳೆ ಮಸಾಜ್ ಸೆಂಟರ್‌ನಲ್ಲಿದ್ದ ನಾಲ್ವರು ಯುವತಿಯರನ್ನು ರಕ್ಷಿಸಲಾಗಿದೆ.

ಮಂಗಳೂರು ನಗರದ ಬಿಜೈ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯಿರುವ ಅದಿತ್ಯ ಹೆಸರಿನ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿ ನಡೆಸುತ್ತಿದ್ದ ಮಸಾಜ್ ಸೆಂಟರ್‌ನಲ್ಲಿ ಯುವತಿಯರು ಹಾಗೂ ಮಹಿಳೆಯರನ್ನು ಇಟ್ಟುಕೊಂಡು ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆಗೆ ನಡೆಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಖಚಿತ ಮಾಹಿತಿಯ ಆದಾರದ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಉಮೇಶ್, ಜಗದೀಶ್, ಮಹೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ ಆರೋಪಿಗಳು ಈ ಮಸಾಜ್ ಪಾರ್ಲರ್‌ನಲ್ಲಿ ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆಗೆ ಪ್ರೇರೆಪಿಸುತ್ತಿದ್ದರು ಎನ್ನಲಾಗಿದ್ದು, ಮಸಾಜ್ ಸೆಂಟರ್‌ನಲ್ಲಿದ್ದ ನಾಲ್ವರು ಯುವತಿಯರನ್ನು ರಕ್ಷಿಸಲಾಗಿದೆ. ಆರೋಪಿಗಳನ್ನು ಮುಂದಿನ ಕ್ರಮಕ್ಕಾಗಿ ಬರ್ಕೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಸಿಸಿಬಿ ಘಟಕದ ಇನ್ಸ್‌ಪೆಕ್ಟರ್ ಶಾಂತಾರಾಮ, ಬರ್ಕೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಮಕೃಷ್ಣ ಹಾಗೂ ಸಿಸಿಬಿ ಘಟಕದ ಪಿಎಸ್‌ಐ ಶ್ಯಾಮ್ ಸುಂದರ್, ಹೆಚ್.ಡಿ. ಕಬ್ಬಾಳ್ ರಾಜ್ ಹಾಗೂ ಸಿಸಿಬಿ ಘಟಕದ ಮತ್ತು ಬರ್ಕೆ ಪೊಲೀಸ್ ಠಾಣೆಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Comments are closed.