ಕರಾವಳಿ

ಕತುವಾ ಅತ್ಯಾಚಾರಿಗಳ ಕುಟುಂಬಕ್ಕೆ ಸಾಂತ್ವನ ಸಲ್ಲಿಸಿದ ಮಂಗಳೂರಿನ ಕಾಂಗ್ರೆಸ್ ಮುಖಂಡೆ : ಹೇಳಿಕೆ ಬಗ್ಗೆ ವ್ಯಾಪಕ ಟೀಕೆ

Pinterest LinkedIn Tumblr

ಮಂಗಳೂರು, ಏಪ್ರಿಲ್ 16 : ಮಂಗಳೂರಿನ ಕಾಂಗ್ರೆಸ್ ಮುಖಂಡೆಯೊಬ್ಬರು ಅತ್ಯಾಚಾರಿಗಳ ಕುಟುಂಬಕ್ಕೆ ಸಾಂತ್ವನ ಎಂದು ವಿವಾದತ್ಮಕ ಹೇಳಿಕೆ ನೀಡಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಭಾರೀ ಟೀಕೆ ವ್ಯಕ್ತವಾಗಿದೆ.

ಜಮ್ಮು- ಕಾಶ್ಮೀರದಲ್ಲಿ ಪುಟ್ಟ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ವಿರುದ್ಧ ದ.ಕ.ಜಿಲ್ಲಾ ಕಾಂಗ್ರೆಸ್‌ನ ಮಹಿಳಾ ಘಟಕದ ವತಿಯಿಂದ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ ಅವರು ಈ
ವಿವಾದತ್ಮಕ ಹೇಳಿಕೆ ನೀಡಿದ್ದರು.

ಜಮ್ಮು- ಕಾಶ್ಮೀರದ ಕತುವಾದಲ್ಲಿ ನಡೆದ ಅತ್ಯಾಚಾರ ಘಟನೆ ಖಂಡಿಸಿ ಮಂಗಳೂರಿನಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ಭಾನುವಾರ ಸಂಜೆ ಪ್ರತಿಭಟನೆ ಆಯೋಜಿನಲಾಗಿತ್ತು. ನಗರದ ಲಾಲ್ ಬಾಗ್ ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಸೇರಿದ ಕಾಂಗ್ರೆಸ್ ಕಾರ್ಯಕರ್ತೆಯರು ಘಟನೆ ಖಂಡಿಸಿ, ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ, ದೇಶದಲ್ಲಿ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದ್ದು, ಆತಂಕದಲ್ಲಿ ಬದುಕುವಂತಹ ಪರಿಸ್ಥತಿ ನಿರ್ಮಾಣವಾಗಿದೆ. ದೇಶದಲ್ಲಿ ಮಹಿಳೆಯರು ಹಾಗೂ ಮಕ್ಕಳು ಭಯದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ., ಈ ಅತ್ಯಾಚಾರ ಘಟನೆ ವಿರುದ್ಧ ದೇಶದಲ್ಲಿ ಮಹಿಳೆಯರು ಒಂದಾಗಿ ಧ್ವನಿ ಎತ್ತಬೇಕು ಎಂದು ಕರೆ ನೀಡಿದರು .

ಜಮ್ಮು- ಕಾಶ್ಮೀರದಲ್ಲಿ ಪುಟ್ಟ ಬಾಲಕಿ ಮೇಲೆ ನಡೆದ ಅತ್ಯಾಚಾರ ಘಟನೆ ಖಂಡಿಸಿ ಮಾತನಾಡುವ ಭರದಲ್ಲಿ ಶಾಲೆಟ್ ಪಿಂಟೋ ಅವರು, ಅತ್ಯಾಚಾರಿಗಳ ಕುಟುಂಬಕ್ಕೆ ಸಾಂತ್ವನ ಹೇಳಿದರು. “ಅತ್ಯಾಚಾರಿಗಳ ಕುಟುಂಬಕ್ಕೆ ಸಾಂತ್ವನ‌ ಹೇಳುತ್ತೇವೆ”, “ಅವರ ದುಃಖದಲ್ಲಿ ನಾವು ಭಾಗಿಯಾಗಿದ್ದೇವೆ”, ಇದಕ್ಕೆ “ಎಲ್ಲಾ ಮಹಿಳೆಯರು ಧ್ವನಿಯಾಗಬೇಕು” ಎಂದು ಹೇಳಿಕೆ ನೀಡಿದರು. ಇದೀಗ ಇವರ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಭಾರೀ ಆಕ್ರೋಷ ವ್ಯಕ್ತವಾಗಿದೆ.

Comments are closed.