ಕರಾವಳಿ

ಕಥುವಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ : ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಮೌನ ಪ್ರತಿಭಟನೆ

Pinterest LinkedIn Tumblr

ಮಂಗಳೂರು: ಜಮ್ಮುವಿನ ಕಥುವಾದಲ್ಲಿ ಎಂಟು ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ, ಬರ್ಬರ ಹತ್ಯೆಗೈದ ಪ್ರಕರಣವನ್ನು ಖಂಡಿಸಿ ದ.ಕ. ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಮೌನ ಪ್ರತಿಭಟನೆ ನಡೆಸಲಾಯಿತು.

ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಕಾರರು ಬಾಯಿಗೆ ಬಟ್ಟೆ ಕಟ್ಟಿಕೊಂಡು ಘಟನೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಇಬ್ಬರು ಪುಟಾಣಿಗಳು ಪಾಲ್ಗೊಂಡು ಘಟನೆ ವಿರೋಧಿಸಿದ ಭಿತ್ತಿಪತ್ರವನ್ನು ಹಿಡಿದು ಗಮನ ಸೆಳೆದರು. ಮಕ್ಕಳ ಮೇಲೆ ನಡೆಯುತ್ತಿರುವ ಈ ಬರ್ಬರ ಕೃತ್ಯಗಳು ಕೊನೆಯಾಗಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಕಥುವಾ ಒಂದು ಪ್ರಕರಣವಲ್ಲ ಯಾವೂದೇ ಪ್ರದೇಶದಲ್ಲಿ ಮಹಿಳೆಯರ, ಮಕ್ಕಳ, ದುರ್ಬಲರ ಮೇಲೆ ನಡೆಯುತ್ತಿರುವ ಅತ್ಯಾಚಾರವೆಂಬ ವಿಕೃತಿಯನ್ನು ಸಮಾಜದಿಂದಲೇ ಸಂಪೂರ್ಣವಾಗಿ ದೂರ ಮಾಡುವುದು ನಮ್ಮ ಗುರಿಯಾಗಬೇಕು.. ಅತ್ಯಾಚಾರಕ್ಕೆ ಒಳಗಾದ ಸಂತೃಸ್ತೆಯರಿಗೆ ಎಲ್ಲಾ ರೀತಿಯ ನೆರವು ಸಮಾಜದಿಂದ ದೊರಬೇಕು. ಅವರನ್ನು ಸಮಾಜ ಕೆಟ್ಟ ದೃಷ್ಟಿಯಿಂದ ನೋಡಬಾರದು ಬದಲಾಗಿ ಅತ್ಯಾಚಾರ ಮಾಡುವ ವ್ಯಕ್ತಿಗಳಿಗೆ ಬದುಕಿನಲ್ಲಿ ಮರೆಯಲಾರದಂತಹ ಶಿಕ್ಷೆ ನೀಡಬೇಕು ಎಂದು ಪ್ರತಿಭಟನನಿರತರು ಒತ್ತಾಯಿಸಿದರು.

Comments are closed.