ಕರಾವಳಿ

ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ನಾಮಪತ್ರ ಸಲ್ಲಿಕೆ

Pinterest LinkedIn Tumblr

ಮಂಗಳೂರು, ಎಪ್ರಿಲ್. 23: 2018ರ ರಾಜ್ಯ ವಿಧಾನಸಭಾ ಚುನಾವಣೆಗೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಡಿ. ವೇದವ್ಯಾಸ್ ಕಾಮತ್ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.

ಇಂದು ಬೆಳಿಗ್ಗೆ ಕೊಡಿಯಾಲಬೈಲ್ನಲ್ಲಿ ಇರುವ ಅವರ ಕಚೇರಿಯಿಂದ ನೂರಾರು ಬಿಜೆಪಿ ಕಾರ್ಯಕರ್ತರು ನಗರದ ರಥಭೀದಿಯ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ತೆರಳಿ .ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ ಅವರು ಪಕ್ಷದ ಗೆಲುವಿಗಾ ಪ್ರಾರ್ಥಿಸಿ ಶ್ರೀ ಮಂಜುನಾಥ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

 ಬಳಿಕ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಅವರು ಕುದ್ರೋಳಿ ಶ್ರೀ ಕ್ಷೇತ್ರದಲ್ಲಿ ಶ್ರೀ ನಾರಾಯಣ ಗುರು ಸ್ವಾಮಿಯವರ ಸನ್ನಿಧಾನದಲ್ಲಿ ಸ್ವಾಮಿಯ ಆಶೀರ್ವಾದ ಪಡೆದರು.

ಬಳಿಕ ಪಕ್ಷದ ಹಿರಿಯ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳ ಜೊತೆ ಕುದ್ರೋಳಿಯಿಂದ ಮಣ್ಣಗುಡ್ಡ, ಬಳ್ಳಾಲ್‌ಬಾಗ್‌ ಮೂಲಕ ಮೆರವಣಿಗೆಯಲ್ಲಿ ಸಾಗಿ ಲಾಲ್‌ಭಾಗ್‍ ನಲ್ಲಿರುವ ಮಂಗಳೂರು ಮಹಾ ನಗರ ಪಾಲಿಕೆಯ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

Comments are closed.