ಕರಾವಳಿ

ಕೇಂದ್ರ ಮೈದಾನದಲ್ಲಿ ಚುನಾವಣಾ ಪ್ರಚಾರ ಸಭೆ :ಮೇ 5ರಂದು ಪ್ರಧಾನಿ ಮೋದಿ ಮಂಗಳೂರಿಗೆ…

Pinterest LinkedIn Tumblr

ಮಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಮೇ 5ರಂದು ಮಂಗಳೂರಿಗೆ ಆಗಮಿಸಿ ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ದ.ಕ.ಜಿಲ್ಲಾ ಬಿಜೆಪಿ ಮುಖಂಡರು ತಿಳಿಸಿದ್ದಾರೆ.

ಈ ಮೊದಲು ಮೇ ೮ರಂದು ಬಂಟ್ವಾಳಕ್ಕೆ ಮೋದಿ ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ಆದರೆ ಇದೀಗ ನಿರ್ಧಿಷ್ಟ ದಿನಕ್ಕಿಂತ ಮೂರು ದಿನ ಮೊದಲೇ ಅಂದರೆ ಮೇ 5 ರಂದು ಪ್ರಧಾನಿ ಮಂಗಳೂರಿಗೆ ಆಗಮಿಸಲಿದ್ದಾರೆ. ಮಂಗಳೂರಿನ ಕೇಂದ್ರ ಮೈದಾನದಲ್ಲಿ ಅಂದು ಸಂಜೆ ಆರು ಗಂಟೆಗೆ ಮೋದಿಯವರು ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.

ದ.ಕ.ಜಿಲ್ಲೆಗೆ ಆಗಮಿಸಲಿರುವ ಪ್ರಧಾನಿ ಮೋದಿಯವರು ದ. ಕ ಜಿಲ್ಲೆ ಮತ್ತು ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಪ್ರಚಾರ ಸಭೆ ನಡೆಯುವ ಸ್ಥಳವನ್ನು ಗುರುತಿಸಲಾಗಿದ್ದು, ಮೇ 5ರಂದು ಪಕ್ಷದ ರ್‍ಯಾಲಿ ನಡೆಯಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಮಾಹಿತಿ ನೀಡಿದ್ದಾರೆ.

Comments are closed.