ಕರಾವಳಿ

ಸಿದ್ಧರಾಮಯ್ಯ ಸರಕಾರದ ದುರಾಡಳಿತದಿಂದ ಹೆಚ್ಚು ಬಳಲಿದವರು ದಕ್ಷಿಣ ಕನ್ನಡ ಜಿಲ್ಲೆಯವರು : ವಿ. ಸುನೀಲ್ ಕುಮಾರ್

Pinterest LinkedIn Tumblr

ಮಂಗಳೂರು, ಮೇ.03: ನಮ್ಮ ರಾಜ್ಯದಲ್ಲಿ ಸಿದ್ಧರಾಮಯ್ಯನವರ ದುರಾಡಳಿತವನ್ನು ಕೊನೆಗೊಳಿಸಲು ಜನ ಸಿದ್ಧರಾಗಿದ್ದಾರೆ. ಸಿದ್ಧರಾಮಯ್ಯನವರ ಕೆಟ್ಟ ಆಡಳಿತದಿಂದ ಅತೀ ಹೆಚ್ಚು ದೌರ್ಜನ್ಯಕ್ಕೆ ಒಳಗಾದವರು ದಕ್ಷಿಣ ಕನ್ನಡ ಜಿಲ್ಲೆಯವರು ಎಂದು ವಿಪಕ್ಷ ಮುಖ್ಯ ಸಚೇತಕ ವಿ ಸುನೀಲ್ ಕುಮಾರ್ ಹೇಳಿದ್ದಾರೆ.

ಅವರು ಮಂಗಳೂರು ನಗರ ದಕ್ಷಿಣ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಡಿ ವೇದವ್ಯಾಸ ಕಾಮತ್ ಪರವಾಗಿ ಪಾದಯಾತ್ರೆ ಮತ್ತು ಮನೆಮನೆ ಪ್ರಚಾರದಲ್ಲಿ ಭಾಗವಹಿಸಿದರು. ಈ ವೇಳೆ ನಾಗುರಿಯಿಂದ ಕಂಕನಾಡಿ ಗರೋಡಿಯ ತನಕ ನಡೆದ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಸುನೀಲ್ ಕುಮಾರ್ ಅವರು, ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ಆಡಳಿತ ಮತ್ತು ರಾಜ್ಯದಲ್ಲಿ ಯಡಿಯೂರಪ್ಪನವರ ಆಡಳಿತ ಜೊತೆಯಾದರೆ ಕರ್ನಾಟಕ ಅಭಿವೃದ್ಧಿ ಮಾತ್ರವಲ್ಲ ಶಾಂತಿ, ಸುವ್ಯವಸ್ಥೆಯಿಂದ ನಾವೆಲ್ಲರೂ ಬದುಕುವ ವಾತಾವರಣ ನಿರ್ಮಾಣವಾಗುತ್ತೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಯಡಿಯೂರಪ್ಪನವರ ಸರಕಾರ ಬರುವಾಗ ಮಂಗಳೂರು ನಗರ ದಕ್ಷಿಣದಲ್ಲಿ ಡಿ ವೇದವ್ಯಾಸ ಕಾಮತ್ ಅವರು ಗೆಲ್ಲುವ ಮೂಲಕ ಕೇಂದ್ರ, ರಾಜ್ಯ ಮತ್ತು ಈ ಕ್ಷೇತ್ರದಲ್ಲಿ ಬಿಜೆಪಿ ಆಡಳಿತ ಬಂದು ಎಲ್ಲವೂ ಅಭಿವೃದ್ಧಿ ಪೂರಕವಾಗಲಿದೆ ಎಂದು ಅವರು ತಿಳಿಸಿದರು.

ಅಭ್ಯರ್ಥಿ ವೇದವ್ಯಾಸ ಕಾಮತ್ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಸರಕಾರ ಬರುವುದು ನಿಶ್ಚಿತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿ ಮೇ 5 ರಂದು ರ್‍ಯಾಲಿ ನಡೆಸುವುದು ಕಾರ್ಯಕರ್ತರಲ್ಲಿ ಇನ್ನಷ್ಟು ಉತ್ಸಾಹ ಹೆಚ್ಚಿದಂತಾಗಿದೆ ಎಂದು ಹೇಳಿದರು. ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು, ಬಿಜೆಪಿ ಪದಾಧಿಕಾರಿಗಳು ಮತ್ತು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದರು.

Comments are closed.