
( ಕಡತ ಚಿತ್ರ )
ಮಂಗಳೂರು: ಬಿಜೆಪಿ ಹಮ್ಮಿಕೊಂಡಿರುವ ಬೃಹತ್ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿಯವರು ನಾಳೆ (ಮೇ 5) ಮಂಗಳೂರಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಸಿದ್ಧತೆಗಳು ಭರದಿಂದ ನಡೆಯುತ್ತಿವೆ.
ಕರ್ನಾಟಕದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಹವಣಿಸುತ್ತಿರುವ ಬಿಜೆಪಿಗೆ ಶಕ್ತಿ ತುಂಬಲು ಪ್ರಧಾನಿ ಮೋದಿ ರಾಜ್ಯ ಪ್ರವಾಸ ಕೈಗೊಂಡಿದ್ದು, ನಾಳೆ ಸಂಜೆ ಮಂಗಳೂರಿನಲ್ಲಿ ದ.ಕ.ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕೈಗೊಳ್ಳಲ್ಲಿದ್ದಾರೆ.

ನಾಳೆ ಸಂಜೆ 5.30ಕ್ಕೆ ನಗರದ ಕೇಂದ್ರ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಬೃಹತ್ ಚುನಾವಣಾ ಪ್ರಚಾರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೋದಿ ಭಾಗವಹಿಸುವ ಸಮಾವೇಶಕ್ಕೆ ಮಂಗಳೂರಿನ ನೆಹರೂ ಮೈದಾನ ಸಜ್ಜುಗೊಳಿಸಲಾಗಿದೆ ಎಂದು ಪಕ್ಷದ ಜಿಲ್ಲಾ ಉಸ್ತುವಾರಿ ಮೋನಪ್ಪ ಭಂಡಾರಿ ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರ ಆಗಮನದ ಹಿನ್ನಲೆಯಲ್ಲಿ, ಭರದಿಂದ ಸಿದ್ಧಗೊಳ್ಳುತ್ತಿರುವ ಮಂಗಳೂರಿನ ಕೇಂದ್ರ ಮೈದಾನಕ್ಕೆ ಗುರುವಾರ ಸಂಜೆ ಕಾರ್ಯಕ್ರಮದ ಉಸ್ತುವಾರಿಗಳಾದ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮೋನಪ್ಪ ಭಂಡರಿ, ರುಕ್ಮಯ್ಯ ಪೂಜಾರಿ, ಸುದರ್ಶನ್, ನಿತಿನ್ ಕುಮಾರ್, ಪ್ರಸಾದ್ ಮೊದಲಾದವರು ಹಾಜರಿದ್ದರು.
Comments are closed.