ಕರಾವಳಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿ : ದ.ಕ.ಬಿಜೆಪಿ ಪ್ರಣಾಳಿಕೆ ಬಿಡುಗಡೆಗೊಳಿಸಿ ಸಂಸದ ನಳಿನ್

Pinterest LinkedIn Tumblr

ಮಂಗಳೂರು, ಮೇ 6: ದ.ಕ.ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಪ್ರಣಾಳಿಕೆ ರಚನಾ ಸಮಿತಿಯು ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಕ್ಕೂ ತೆರಳಿ ಜನರ ಅಭಿಪ್ರಾಯವನ್ನು ಸಂಗ್ರಹಿಸಿದೆ. ಅದರ ಆಧಾರದ ಮೇಲೆ ಈ ಪ್ರಣಾಳಿಕೆ ತಯಾರಿಸಲಾಗಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದರೆ ಪ್ರಣಾಳಿಕೆಯಲ್ಲಿ ತಿಳಿಸಿದ ಅಂಶಗಳನ್ನು ಹಂತ ಹಂತವಾಗಿ ಅನುಷ್ಠಾನ ಗೊಳಿಸಲಾಗು ವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಅವರು ರವಿವಾರ ಪಕ್ಷದ ಜಿಲ್ಲಾ ಕಚೇರಿಯಲ್ಲಿ ದ.ಕ.ಜಿಲ್ಲಾ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಲು ಮುಂದಾಗಿದ್ದರೂ ಕೂಡ ರಾಜ್ಯ ಸರಕಾರ ಸ್ಪಂದನೆ ನೀಡದ ಕಾರಣ ಯೋಜನೆಗಳು ಅನುಷ್ಠಾನಗೊಂಡಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂದರೆ ಇಂತಹ ಸಮಸ್ಯೆಗಳು ಉದ್ಭವಿಸುವುದಿಲ್ಲ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

ಕಾರ್ಯಕ್ರಮದಲ್ಲಿ ಸಚಿವ ಮಹೇಂದ್ರ ಸಿಂಗ್, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಪಕ್ಷದ ಪ್ರಮುಖರಾದ ಸತೀಶ್ ಕುಂಪಲ, ಚಂದ್ರಹಾಸ ಉಚ್ಚಿಲ್ ಮತ್ತಿತರರು ಉಪಸ್ಥಿತರಿದ್ದರು.

Comments are closed.