ಕರಾವಳಿ

ಮಂಗಳೂರು ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಭರ್ಜರಿ ಗೆಲುವು 

Pinterest LinkedIn Tumblr

 

ಮಂಗಳೂರು, ಮೇ.15 : ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಕೈಯಲ್ಲಿದ್ದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಈ ಬಾರಿ ಬಿಜೆಪಿ ಪಾಲಾಗಿದೆ.

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ್ ಕಾಮತ್ ಅವರು ತಮ್ಮ ಪ್ರತಿಸ್ಫರ್ಧಿ ವಿರುದ್ಧ ಸುಮಾರು 16 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದಾರೆ.

ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೋ (30569) ವಿರುದ್ಧ ವೇದವ್ಯಾಸ್ ಕಾಮತ್ (47231) ಅವರು ಭಾರೀಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ಇತರ ಎಲ್ಲಾ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.

Comments are closed.