ಕರಾವಳಿ

ಪುತ್ತೂರಿನಲ್ಲೂ ಬಿಜೆಪಿ ಗೆಲುವು : ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು: ಬೆಳ್ತಂಗಡಿಯಲ್ಲಿ ಬಾರೀ ಮುನ್ನಡೆ

Pinterest LinkedIn Tumblr

ಮಂಗಳೂರು, ಮೇ.15 : ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಕೈಯಲ್ಲಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರ ಕೂಡ ಈ ಬಾರಿ ಬಿಜೆಪಿ ಪಾಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಬಿಜೆಪಿ ಆರು ಕ್ಷೇತ್ರಗಳನ್ನು ತನ್ನ ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕಿ ಶಕುಂತಳಾ ಶೆಟ್ಟಿಯವರನ್ನು ಪರಾಜಯಗೊಳಿಸುವ ಮೂಲಕ ಪುತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಗೆಲುವು ದಾಖಲಿಸಿದ್ದಾರೆ.

ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಕುಂತಳಾ ಶೆಟ್ಟಿಯವರು 61102 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. 80147 ಮತಗಳನ್ನು ಪಡೆಯುವ ಮೂಲಕ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸಂಜೀವ ಮಠಂದೂರು ಭರ್ಜರಿ ಜಯ ಸಾಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಈಗಾಗಲೇ ಏಳು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದ್ದು, ಎಂಟರಲ್ಲಿ ಆರು ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಒಂದು ಕ್ಷೇತ್ರದಲ್ಲಿ ಮಾತ್ರ (ಉಳ್ಳಾಲ) ಕಾಂಗ್ರೆಸ್ ತನ್ನ ಕ್ಷೇತ್ರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಶಕುಂತಳಾ ಶೆಟ್ಟಿ

ಬೆಳ್ತಂಗಡಿ ಕ್ಷೇತ್ರದ ಫಲಿತಾಂಶ ಮಾತ್ರ ಬರಲು ಬಾಕಿ ಇದ್ದು, ಅಲ್ಲಿ ಕೂಡ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ತಮ್ಮ ಪ್ರತಿ ಸ್ಫರ್ಧಿ ಕಾಂಗ್ರೆಸ್ ಅಭ್ಯರ್ಥಿ ,ಹಾಲಿ ಶಾಸಕ ವಸಂತ್ ಬಂಗೇರಾ ಅವರಿಗಿಂತ ಸುಮಾರು 12 ಸಾವಿರ ಮತಗಳ ಮುನ್ನಡೆಯಲ್ಲಿದ್ದಾರೆ

 

Comments are closed.