
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ 104 ಸ್ಥಾನಗಳನ್ನು ಪಡೆಯುವ ಮೂಲಕ ಬಹುಮತ ಪಡೆದಿದ್ದು, ಬಿಜೆಪಿ ಸರ್ಕಾರ ರಚನೆಯ ಅವಕಾಶ ನೀಡುವಂತೆ ರಾಜ್ಯಪಾಲರನ್ನು ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಅನಂತ್ ಕುಮಾರ್, ಶ್ರೀರಾಮುಲು, ಶೋಭಾ ಕರಂದ್ಲಾಜೆ ಜೊತೆ ರಾಜಭವನಕ್ಕೆ ಭೇಟಿ ನೀಡಿದ ಯಡಿಯೂರಪ್ಪ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಬಿಜೆಪಿಗೆ ಹೆಚ್ಚಿನ ಸಂಖ್ಯಾ ಬಲವಿದೆ, ಹೀಗಾಗಿ ಸರ್ಕಾರ ರಚನೆಗೆ ಅವಕಾಶ ಕೋರಿದ್ದೇವೆ: ಸರಕಾರ ನಾವು ರಚನೆ ಮಾಡುತ್ತೇವೆ ಎಂದರು.
ಸರ್ಕಾರ ರಚನೆ ಮಾಡುವಷ್ಟು ಶಾಸಕರ ಬಲ (112) ಇಲ್ಲವಾದರೂ ಅತಿ ಹೆಚ್ಚು ಶಾಸಕರ ಸಂಖ್ಯೆ ಹೊಂದಿರುವ ಏಕೈಕ ಪಕ್ಷ ಬಿಜೆಪಿಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹಾಗೂ ಅನಂತ್ ಕುಮಾರ್ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಅವಕಾಶ ಕೋರಿದ್ದಾರೆ.
ಇತ್ತ ಜೆಡಿಎಸ್-ಕಾಂಗ್ರೆಸ್ ಸಹ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಮುಂದಾಗಿದ್ದು, ರಾಜಭವನಕ್ಕೆ ತೆರಳಿ ಹೆಚ್ ಡಿ ಕುಮಾರಸ್ವಾಮಿ ಆಗಮಿಸಿ ಸರ್ಕಾರ ರಚನೆಗೆ ಅವಕಾಶ ಕೋರಲಿದ್ದಾರೆ. ಯಾರಿಗೆ ಸರ್ಕಾರ ರಚನೆಗೆ ಅವಕಾಶ ನೀಡಬೇಕೆಂಬುದು ರಾಜ್ಯಪಾಲರ ವಿವೇಚನೆಗೆ ಬಿಟ್ಟ ವಿಚಾರವಾಗಿದ್ದು, ರಾಜ್ಯಪಾಲರ ನಿರ್ಧಾರದ ಮೇಲೆ ಯಾರು ಸರ್ಕಾರ ರಚನೆ ಮಾಡುತ್ತಾರೆ ಎಂಬುದು ತಿಳಿಯಲಿದೆ.
Comments are closed.