
ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಇತ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.
ರಾಜಭವನದಲ್ಲಿ ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿದ ಅರ್ಧಗಂಟೆ ಗಳಿಕ ಸಿದ್ದರಾಮಯ್ಯ, ಜಿ. ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ನಾಯಕ ಗುಲಾಂ ನಭಿ ಆಜಾದ್ ಅವರ ನೇತೃತ್ವದಲ್ಲಿ ಪ್ರತಿಭಟನೆಗೆ ಕುಳಿತಿದ್ದಾರೆ.
ಎಚ್.ಕೆ.ಪಾಟೀಲ, ಮಲ್ಲಿಕಾರ್ಜುನ ಪಾಟೀಲ,ಹ್ಯಾರಿಸ್, ಕೃಷ್ಟ ಭೈರೇಗೌಡ, ಜಮಿರ್ ಅಹ್ಮದ್, ಎಚ್.ಡಿ.ರೇವಣ್ಣ, ರಮೇಶ್ ಜಾರಕಿಹೊಳಿ, ಅಶೋಖ್ ಗೆಹ್ಲೋಟ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದಾರೆ. ಪ್ರತಿಭಟನೆಗೆ ಜೆಡಿಎಸ್‌ನ ಸದಸ್ಯರೂ ಸಾಥ್ ನೀಡಿದ್ದಾರೆ.
Comments are closed.