ಕರಾವಳಿ

ಬಂಟ್ವಾಳ : ಮಾವನನ್ನೇ ಚಾಕುವಿನಿಂದ ಚುಚ್ಚಿ ಕೊಲೆಗೈದ ಅಳಿಯ

Pinterest LinkedIn Tumblr

ಬಂಟ್ವಾಳ,ಜೂನ್.02: ಮಾವನನ್ನು ಅಳಿಯನೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಇಂದು ಮಧ್ಯಾಹ್ನ ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ಕಟ್ಟದಪಡ್ಪು ಎಂಬಲ್ಲಿ ನಡೆದಿದೆ.

ಮಾವನಿಂದಲೇ ಹತ್ಯೆಗೀಡಾದ ದುರ್ದೈವಿಯನ್ನು ರಮಾನಂದ (48) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಯನ್ನು ಮೃತರ ಪತ್ನಿಯ ತಂದೆ ಅಮನ್ನ ಪೂಜಾರಿ ಎಂದು ಗುರುತಿಸಲಾಗಿದ್ದು, ಕೊಲೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದ್ದು, ಯಾವ ಕಾರಣಕ್ಕೆ ಕೊಲೆ ನಡೆದಿದೆ ಎನ್ನುವುದು ತನಿಖೆಯಿಂದ ಇನ್ನಷ್ಟೇ ತಿಳಿದು ಬರಬೇಕಿದೆ. ಕುಡಿದ ಮತ್ತಿನಲ್ಲಿದ್ದ ಆರೋಪಿ ಅಮನ್ನ ರಮಾನಂದರನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಮಧ್ಯಾಹ್ನ ಸುಮಾರು 12 ಗಂಟೆಗೆ ಘಟನೆ ನಡೆದಿದ್ದು, ರಮಾನಂದರ ಪತ್ನಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸರು, ಡಿವೈಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Comments are closed.