ಉಡುಪಿ: ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆನಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಶುಕ್ರವಾರವೂ ಮಳೆ ಸತತವಾಗಿ ಸುರಿಯುತ್ತಿದೆ. ಮುಂಗಾರು ಆಗಮನದಿಂದಾಗಿ ರೈತನ ಮೊಗದಲ್ಲಿ ಸಂತಸ ಹೆಚ್ಚಿದೆ.
ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ. ಕಳೆದ ವಾರ ಮಳೆಯಿಂದಾಗಿ ಕೆಲ ಅನಾಹುತಗಳು ಸಂಭವಿಸಿದ್ದು ಈ ಹಿನ್ನೆಲೆ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಶಾಲೆ-ಕಾಲೇಜಿಗೆ ರಜೆ ಘೋಷಣೆ ಮಾಡಿದೆ. ಶುಕ್ರವಾರ ಹಾಗೂ ಶನಿವಾರ ರಜೆ ನೀಡಲಾಗಿದೆ.
ಇನ್ನು ಜಿಲ್ಲೆಯ ವಿವಿದೆಡೆ ಕ್ರತಕ ನೆರೆಗಳು ಸ್ರಷ್ಟಿಯಾಗಿದೆ. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದೆ. ತಗ್ಗು ಪ್ರದೇಶಗಳು ಜಲಾವ್ರತಗೊಂಡಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅರೆಬರೆ ನಡೆದ ಪ್ರದೇಶದಲ್ಲಿ ನೀರು ನಿಂತು ಕೆರೆಯಂತಾಗಿದೆ. ಗಾಳಿ, ಸಿಡಿಲು ಇಲ್ಲ.
Comments are closed.