ಕರಾವಳಿ

ಬಂಟ್ವಾಳದಲ್ಲಿ ಕಾಂಗ್ರೆಸ್ ಕಾರ್ಯಕರ್ತನಿಂದ ತಲವಾರು ದಾಳಿ : ಜಾಲತಾಣಗಳಲ್ಲಿ ವೀಡಿಯೊ ವೈರಲ್

Pinterest LinkedIn Tumblr

ಬಂಟ್ವಾಳ, ಜೂನ್‌. 12: ಬಂಟ್ವಾಳ ಪೇಟೆಯ ಬಡ್ಡಕಟ್ಟೆ ಸಮೀಪ ಕೊಳಿ ಅಂಗಡಿ ಮುಂಭಾಗದಲ್ಲಿ ಸೋಮವಾರ ತಲವಾರು ದಾಳಿ ನಡೆದಿದ್ದು, ದಾಳಿಯಿಂದ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತ ಸುರೇಂದ್ರ ಬಂಟ್ವಾಳ ಹಾಗೂ ಸಹಚಾರರು ತಲವಾರು ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ. ಘಟನೆಯಲ್ಲಿ ಗಣೇಶ್ ಮತ್ತು ಪುಷ್ಪರಾಜ್ ಎಂಬವರಿಗೆ ಗಾಯಗಳಾಗಿದ್ದು, ಗಾಯಾಳುಗಳು ಆಸ್ಪತ್ರೆಗೆ ದಾಖಲುಗೊಂಡಿದ್ದು, ಚಿಕಿತ್ಸೆಗೊಳಪಡಿಸಲಾಗಿದೆ.

ತುಳುಚಿತ್ರವೊಂದರಲ್ಲಿ ನಟಿಸಿರುವ ಸುರೇಂದ್ರ ಬಂಟ್ವಾಳ ಈ ಹಿಂದೆ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು, ಬಳಿಕ ಕಾಂಗ್ರೆಸ್ ಸೇರಿದ್ದು, ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ತಲವಾರು ದಾಳಿ ನಡೆದಿರಬೇಕೆಂದು ಶಂಕಿಸಲಾಗಿದೆ.ದಾಳಿಗೆ ನಿಖರ ಕಾರಣ ಏನೆಂಬುವುದು ಇನ್ನಷ್ಟೇ ತಿಳಿದು ಬರಬೇಕಿದೆ.

ಘಟನಾ ಸ್ಥಳದಲ್ಲಿ ತಲವಾರುಗಳು ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಂಟ್ವಾಳ ನಗರ‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧಿಸಿದ್ದು ಎಂದು ಹೇಳಲಾದ ವೀಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Comments are closed.