ಕರಾವಳಿ

ಕರಾವಳಿಯಲ್ಲಿ ಮಳೆಯ ಅಬ್ಬರ : ತುಂಬಿ ಹರಿಯುತಿರುವ ನದಿ,ತೊರೆಗಳು : ನಗರದಲ್ಲಿ ತಗ್ಗು ಪ್ರದೇಶಗಳು ಜಲಾವೃತ

Pinterest LinkedIn Tumblr

ಮಂಗಳೂರು: ಕರಾವಳಿ ಜಿಲ್ಲೆಯಾದ್ಯಂತ ಮತ್ತೆ ಮಳೆ ಅಬ್ಬರ ಜೋರಾಗಿದ್ದು. ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ನದಿಗಳು, ತೊರೆಗಳು ತುಂಬಿ ಹರಿಯುತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುವ ಮಳೆಗೆ ಕೆಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ರಸ್ತೆ ಮೇಲೆ ನೀರು ಹರಿಯುತ್ತಿರುವುದರಿಂದ ವಾಹನ ಸವಾರರು ಪರದಾಡುತ್ತಿದ್ದಾರೆ.ಪಾದಾಚಾರಿಗಳು ರಸ್ತೆಯಲ್ಲಿ ನಡೆದಾಡಲು ಕಷ್ಟಪಡುತ್ತಿದ್ದಾರೆ.

ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ದ.ಕ.ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸೇತುವೆಗಳು ತುಂಬಿ ಹರಿಯುತ್ತಿದೆ.ಭಾರೀ ಮಳೆ ಸುರಿಯುತ್ತಿರುವುದರಿಂದ ನದಿಗಳು ತೊರೆಗಳು ಭರ್ತಿಯಾಗಿ ಹರಿಯುತ್ತಿವೆ.

ಭಾರಿ ಮಳೆಯಿದ್ರೂ ತಾಲೂಕು ಶಿಕ್ಷಣಾಧಿಕಾರಿ ರಜೆ ಘೋಷಿಸಲಿಲ್ಲ. ಪುತ್ತೂರು ಸುಳ್ಯ, ಬೆಳ್ತಂಗಡಿ ಸೇರಿದಂತೆ ಕರಾವಳಿ ಹಾಗೂ ಮಲೆನಾಡಿನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲಾ ವ್ಯಾಪ್ತಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನಿರ್ಧಾರವನ್ನು ಆಯಾ ಶಾಲೆಗಳಿಗೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಶಾಲಾ ಮುಖ್ಯಸ್ಥರು ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ರಜೆ ಘೋಷಣೆಯ ನಿರ್ಧಾರವನ್ನು ತೆಗೆದುಕೊಳ್ಳಬಹುದು ಎನ್ನುವ ಸೂಚನೆ ಜಿಲ್ಲಾಡಳಿತದಿಂದ ಎಲ್ಲಾ ಶಾಲೆಗಳಿಗೆ ನೀಡಲಾಗಿದೆ.

ಇದೇ ವೇಳೆ ಹವಾಮಾನ ಇಲಾಖೆಯು ಕರಾವಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ನಾಲ್ಕೈದು ದಿನಗಳಲ್ಲಿ ಭಾರೀ ಮಳೆ ಆಗುವುದಾಗಿ ಎಚ್ಚರಿಕೆಯನ್ನು ನೀಡಿದೆ.

Comments are closed.