ಕರಾವಳಿ

ವಿಧಾನಪರಿಷತ್ ವಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ್ ಪೂಜಾರಿ

Pinterest LinkedIn Tumblr

ಬೆಂಗಳೂರು: ವಿಧಾನಪರಿಷತ್​ ವಿರೋಧ ಪಕ್ಷ ನಾಯಕರನ್ನಾಗಿ ಬಿಜೆಪಿ ನಾಯಕ, ವಿಧಾನಪರಿಷತ್ ಹಾಲಿ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರನ್ನು ಆಯ್ಕೆ ಮಾಡಲಾಗಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕಾರಣಿ ಸಭೆಯಲ್ಲಿ ಈ ನಿರ್ಧಾರವ ಕೈಗೊಳ್ಳಲಾಗಿದ್ದು ಬಿಜೆಪಿ ಹಿರಿಯನಾಯಕರಾದ ಯಡಿಯೂರಪ್ಪ, ಮುರುಳೀಧರ್ ರಾವ್ ‌ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿ ತಿರ್ಮಾನ ಮಾಡಿದ್ದು ಪರಿಷತ್ ಸದಸ್ಯರ ಜೊತೆ ಚರ್ಚೆ ನಡೆಸಿ, ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಅಧಿಕೃತ ಘೋಷಣೆಗೆ ಮಾಡಲಾಗಿದೆ.

ವಿಧಾನಪರಿಷತ್​ ವಿರೋಧಪಕ್ಷದ ನಾಯಕರಾಗಿದ್ದ ಕೆ.ಎಸ್​ ಈಶ್ವರಪ್ಪ ಶಾಸಕರಾಗಿ ಆಯ್ಕೆಯಾದ ಹಿನ್ನೆಲೆ ತೆರವಾಗಿದ್ದ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಚರ್ಚೆ ಬಿಜೆಪಿ ಪಾಳಯದಲ್ಲಿ ಶುರುವಾಗಿತ್ತು. ಒಂದಿಬ್ಬರು ಹೆಸರು ಕೇಳಿಬಂದಿದ್ದು ಸದ್ಯ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆಗೆ ನಾಯಕರು ಸಮ್ಮತಿ ಸೂಚಿಸಿದ್ದಾರೆ

ಶ್ರೀನಿವಾಸ್​ ಪೂಜಾರಿ ದ.ಕ.ಜಿಲ್ಲೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಸದಸ್ಯರಾಗಿದ್ದು, ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಮುಜರಾಯಿ ಸಚಿವರಾಗಿದ್ದರು.

ಕೋಟ ಶ್ರೀನಿವಾಸ ಪೂಜಾರಿಯವರ ಆಯ್ಕೆಗೆ ಬಿಲ್ಲವ ಸಮುದಾಯವು ಸಂತಸ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲ ಕರಾವಳಿಯ ಉಭಯ ಜಿಲ್ಲೆಯಲ್ಲೂ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿ ಸಂಭ್ರಮಿಸುತ್ತಿದ್ದಾರೆ.

Comments are closed.